ಹೊಸಪೇಟೆ (ವಿಜಯನಗರ): ‘ಪೂರ್ವ ಮುಂಗಾರು ಅವಧಿಯಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಮತ್ತು ಗಾಳಿ ಮಳೆಯಿಂದಾಗಿ ಸಾಕಷ್ಟು ಸಾವು–ನೋವು ಸಂಭವಿಸುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಜನ ಎಚ್ಚರದಿಂದ ಇರಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕರು, ವಿಶೇಷವಾಗಿ ರೈತರು ಜಿಲ್ಲಾಡಳಿತ ವತಿಯಿಂದ ಸೂಚಿಸುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ಜೀವ, ಆಸ್ತಿಪಾಸ್ತಿ ಉಳಿಸಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.

‘ಪೂರ್ವ ಮುಂಗಾರು ವೇಳೆ ಗುಡುಗು ಸಿಡಿಲು ಶಬ್ದ ಕೇಳಿಸಿದ ತಕ್ಷಣ ತೆರೆದ ಮೈದಾನ, ಗದ್ದೆ ಅಥವಾ ಗುಡ್ಡಗಾಡು ಪ್ರದೇಶದಲ್ಲಿದ್ದರೆ ಕೂಡಲೇ ಸುರಕ್ಷಿತ ಕಟ್ಟಡದ ಒಳಗೆ ಆಶ್ರಯ ಪಡೆಯಬೇಕು. ಒಂಟಿ ಮರ ಅಥವಾ ಎತ್ತರದ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ವಿದ್ಯುತ್ ಉಪಕರಣಗಳಾದ ಮೊಬೈಲ್, ಟಿವಿ, ಫ್ರಿಡ್ಜ್ ಮುಂತಾದ ವಿದ್ಯುತ್ ಉಪಕರಣಗಳ ಬಳಕೆ ಮಾಡಬಾರದು. ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ದಾಮಿನಿ ಆ್ಯಪ್ ಬಳಸುವುದು ಸೂಕ್ತ. ಇದು ಸಿಡಿಲಿನ ಮುನ್ಸೂಚನೆ ನೀಡುತ್ತದೆ’ ಎಂದು ತಿಳಿಸಿದರು.

‘ರೈತರು ಗುಡುಗು– ಮಿಂಚು ಆರಂಭವಾದಾಗ ಜಾನುವಾರುಗಳನ್ನು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳಿಗೆ ಕಟ್ಟದೆ, ಸುರಕ್ಷಿತವಾದ ಶೆಡ್ ಅಥವಾ ಕೊಟ್ಟಿಗೆಯಲ್ಲಿ ಕಟ್ಟಬೇಕು. ಮಳೆ ಬರುವ ಮುನ್ಸೂಚನೆ ಇದ್ದಾಗ ಹೊಲ– ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದರೆ ತಕ್ಷಣ ನಿಲ್ಲಿಸಿ, ಸುರಕ್ಷಿತ ಪ್ರದೇಶಕ್ಕೆ ಸೇರಬೇಕು. ಗಾಳಿ ಮಳೆಗೆ ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಅಂತಹ ಪ್ರಕರಣ ಕಂಡುಬಂದಲ್ಲಿ ತಕ್ಷಣ ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಬೇಕು. ಮಳೆ ಸುರಿಯುವಾಗ ವಾಹನ ಚಾಲನೆ ಮಾಡುವವರು ರಸ್ತೆ ಬದಿಯ ಮರಗಳ ಕೆಳಗೆ ವಾಹನ ನಿಲ್ಲಿಸದೆ, ಸುರಕ್ಷಿತ ಜಾಗದಲ್ಲಿ ನಿಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಹೇಳಿದರು.

‘ಯಾವುದೇ ಆಕಸ್ಮಿಕ ಘಟನೆಗಳು ಸಂಭವಿಸಿದಲ್ಲಿ ತಕ್ಷಣ ಹತ್ತಿರದ ತಹಶೀಲ್ದಾರ್ ಕಚೇರಿ ಅಥವಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಹೆಚ್ಚುವರಿ ಇ.ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.