ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುನ್ನೆಚ್ಚರಿಕೆಯಿಂದ ಕೊರೊನಾ ತಡೆ’-ರವಿಕೃಷ್ಣ ರೆಡ್ಡಿ

Last Updated 4 ಏಪ್ರಿಲ್ 2021, 14:23 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿದರೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಬಹುದು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ತಿಳಿಸಿದರು.

ಭಾನುವಾರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ತೆಗೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಎರಡನೇ ಅಲೆಯ ವಿರುದ್ಧ ಸಂಘಟಿತ ಹೋರಾಟ ಮಾಡಬೇಕು. ಪುನಃ ಲಾಕ್ ಡೌನ್ ಮಾಡಿದರೆ ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ. ಸಾವು ನೋವುಗಳು ತಡೆಯಬೇಕಾದರೆ ಜನ ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು, ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. 45 ವರ್ಷ ಮೇಲಿನ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು’ ಎಂದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ.ಯ.ಗಣೇಶ, ವರುಣ್, ಸೋಮಸುಂದರ್, ಪಿ.ಅಂಜಿನಿ, ಯಲ್ಲಪ್ಪ, ವಿರುಪಾಕ್ಷಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT