ಹೊಸಪೇಟೆ(ವಿಜಯನಗರ): ‘ಬೇಸಿಗೆ ಮುಗಿಯುವವರೆಗೆ ಗ್ರಾಮೀಣ ಭಾಗಗಳಲ್ಲಿ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಎಚ್.ವಿಶ್ವನಾಥ್ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದರು.

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳಪಡುವ ಗ್ರಾಮಗಳಲ್ಲಿ ಮೂರು ತಿಂಗಳವರೆಗೆ ಕೈಗೊಂಡ ಕುಡಿಯುವ ನೀರಿನ ವ್ಯವಸ್ಥೆಯ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ‘ಅಗತ್ಯ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಎಲ್ಲೂ ನೀರಿಗೆ ಹಾಹಾಕಾರ ಉಂಟಾಗಬಾರದು’ ಎಂದು ತಿಳಿಸಿದರು.

‘ಅಪೂರ್ಣ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಐತಿಹಾಸಿಕ ಬಾವಿಗಳ ಅಭಿವೃದ್ಧಿಗೆ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಗ್ರಾಮ ನೀರಾವರಿ ಸಮಿತಿ ಎಂಜಿನಿಯರ್ ಪಂಪಾಪತಿ, ಕಂದಾಯ ಇಲಾಖೆಯ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.