ಬುಧವಾರ, ಆಗಸ್ಟ್ 10, 2022
26 °C

ಶ್ರೀರಾಮ ಸೇನೆಯ ಕಾರ್ಯಕರ್ತರ ಬಂಧನ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಶ್ರೀರಾಮ ಸೇನೆಯ ಕಾರ್ಯಕರ್ತರ ಬಂಧನ ವಿರೋಧಿಸಿ ನಗರದ ಮಹಾತ್ಮ ಗಾಂಧಿ ವೃತ್ತದ ಎದುರು ಶನಿವಾರ ಪ್ರತಿಭಟನೆ ನಡೆಸಲು ಮುಂದಾದ ಹಡಗಲಿಯ ಅಭಿನವ ಹಾಲಸ್ವಾಮೀಜಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದರು.

ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದ ಬಳಿ ಬೆಳಿಗ್ಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾಗ ಅವರನ್ನು ಪೊಲೀಸರು ಬಂಧಿಸಿ, ವೇದಿಕೆ ತೆರವುಗೊಳಿಸಿದ್ದರು. ಅದನ್ನು ವಿರೋಧಿಸಿ ಹಾಲಸ್ವಾಮೀಜಿ ನೇತೃತ್ವದಲ್ಲಿ ಕೆಲವರು ಗಾಂಧಿ ವೃತ್ತದಲ್ಲಿ ಸೇರಿ, ಬಾಯಿಗೆ ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದರು.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ಬಂಧಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು