ಹೊಸಪೇಟೆ(ವಿಜಯನಗರ): ಉತ್ತರಪ್ರದೇಶ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಹಿಂಸಾಚಾರ ನಡೆಸಿ, ಅವರ ಹತ್ಯೆಗೈದ ಖಂಡನೆ ಖಂಡಿಸಿ ಸಂಯುಕ್ತ ರೈತ ಹೋರಾಟ ಸಮಿತಿ, ಎಸ್‌ಯುಸಿಐ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಲಖಿಂಪುರ ಖೇರಿಯಲ್ಲಿ ರೈತರು ಅವರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಹಾಗೂ ಅವರ ಮಗ ಬೆಂಗಾವಲು ವಾಹನಗಳನ್ನು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿರುವುದು ಖಂಡನಾರ್ಹ. ಕೂಡಲೇ ಕೊಲೆಗಡುಕರನ್ನು ಬಂಧಿಸಬೇಕೆಂದು ಹಕ್ಕೊತ್ತಾಯ ಮಾಡಿದರು.

ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಗೊಳಿಸಿ ಅವರ ಮಗ ಆಶಿಶ್ ಮಿಶ್ರಾ ಅವರನ್ನು ಬಂಧಿಸಬೇಕು. ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಬಳಿಕ ರಾಷ್ಟ್ರಪತಿಯವರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್ ಗೆ ಸಲ್ಲಿಸಿದರು.

ಮುಖಂಡರಾದ ಮರಡಿ ಜಂಬಯ್ಯ ನಾಯಕ, ಆರ್.ಭಾಸ್ಕರ್ ರೆಡ್ಡಿ, ಕೆ.ನಾಗರತ್ನಮ್ಮ, ಎನ್. ಯಲ್ಲಾಲಿಂಗ, ಜೆ.ಶಿವಕುಮಾರ್, ಜಿ.ಕರೆ ಹನುಮಂತ, ಸ್ವಾಮಿ, ಜಿ. ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.