ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಣಜಿಗರಿಗೆ ಅವಹೇಳನ ಆರೋಪ: ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಪ್ರತಿಭಟನೆ

Last Updated 16 ನವೆಂಬರ್ 2022, 9:15 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬಣಜಿಗರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ತಹಶೀಲ್ದಾರ್‌ ಕಚೇರಿ ಎದುರು ಸೇರಿದ ಸಂಘದವರು ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮನವಿ ಪತ್ರ ಸಲ್ಲಿಸಿದರು.

ಇತ್ತೀಚೆಗೆ ವಿಜಯಪುರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್‌ ಅವರು ವಿನಾಕಾರಣ ಬಣಜಿಗ ಸಮಾಜದ ಬಗ್ಗೆ ವ್ಯಂಗ್ಯವಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಹೀಗೆ ಮಾಡುವುದರ ಮೂಲಕ ಅವರು ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

2ಎಗೆ ಪಂಚಮಸಾಲಿ ಸಮಾಜದವರನ್ನು ಸೇರ್ಪಡೆಗೊಳಿಸಬೇಕೆಂಬ ಹೋರಾಟಕ್ಕೆ ಬಣಜಿಗರ ಸಂಪೂರ್ಣ ಬೆಂಬಲವಿದೆ. ಸಮಾಜ ಯಾರ ವಿರುದ್ಧವೂ ಇಲ್ಲ. ಎಲ್ಲ ರೀತಿಯ ಸಹಕಾರ ಕೊಡಲು ಸಿದ್ಧ ಎಂದು ತಿಳಿಸಿದರು.

ಸಂಘದ ಗೌರವ ಅಧ್ಯಕ್ಷ ಕಲ್ಮಠಪ್ಪ ಜವಳಿ, ಅಧ್ಯಕ್ಷ ಅಕ್ಕಿ ದೊಡ್ಡಬಸವರಾಜ, ಉಪಾಧ್ಯಕ್ಷರಾದ ಜಿ.ಕೆ. ವಿಶ್ವನಾಥ, ಗಡಾದ ಪ್ರಸಾದ್, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಜಾಲಿ, ಖಜಾಂಚಿ ವೈ. ಅನ್ನದಾನಪ್ಪ, ಸಹಕಾರ್ಯದರ್ಶಿ ಕೆ. ಚಂದ್ರಶೇಖರ್‌, ನಗರಸಭೆ ಸದಸ್ಯ ಮಂಜುನಾಥ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT