ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಪುಸ್ತಕ ಹಿಂಪಡೆಯಲು ಆಗ್ರಹಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ 

Last Updated 5 ಜುಲೈ 2022, 12:59 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಶಾಲೆಗಳಿಂದ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ಬಳಿ ಸೇರಿದ ಕಾರ್ಯಕರ್ತರು ಪ್ರಮುಖ ಮಾರ್ಗಗಳಲ್ಲಿ ರ್‍ಯಾಲಿ ನಡೆಸಿದರು. ಅನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಮುಖ್ಯಮಂತ್ರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಸಿದ್ಧಪಡಿಸಿದ್ದ ಪಠ್ಯಪುಸ್ತಕಗಳನ್ನೇ ಶಾಲೆಗಳಲ್ಲಿ ಮುಂದುವರೆಸಬೇಕು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.

ರೋಹಿತ್‌ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆಯ ಹೆಸರಿನಲ್ಲಿ ಗೌತಮ ಬುದ್ಧ, ಬಸವಣ್ಣ, ಡಾ.ಬಿ.ಆರ್‌. ಅಂಬೇಡ್ಕರ್‌, ಕುವೆಂಪು ಸೇರಿದಂತೆ ಅನೇಕ ಮಹಾನುಭಾವರಿಗೆ ಅವಮಾನ ಮಾಡಿದೆ. ಅಂಬೇಡ್ಕರ್‌ ಬಗೆಗಿನ ಹಲವು ವಿಷಯಗಳಿಗೆ ಕತ್ತರಿ ಹಾಕಿ, ವಿಷ ಕಾರಿದ್ದಾರೆ. ಇಂತಹ ಪಠ್ಯಪುಸ್ತಕಗಳನ್ನು ಶಾಲೆಗೆ ತಲುಪಿಸಿರುವುದು ಖಂಡನಾರ್ಹ ಎಂದು ಆಕ್ರೋಶ ಹೊರಹಾಕಿದರು.

ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಎ‌. ಮಾನಯ್ಯ, ಜಿಲ್ಲಾ ಸಂಚಾಲಕ ಮರಿಸ್ವಾಮಿ ಬಿ, ಸೋಮಶೇಖರ್, ಲಕ್ಷ್ಮಣ,
ಜಗನ್ನಾಥ್, ನಾಗಪ್ಪ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT