ಹೊಸಪೇಟೆ (ವಿಜಯನಗರ): ಹಿರಿಯ ವಕೀಲರಿಗೆ ಎರಡು ವರ್ಷಗಳ ಕಾಲ ಮಾಸಿಕ ತಲಾ ₹10 ಸಾವಿರ ಸ್ಟೈಫಂಡ್, ಅವೈಜ್ಞಾನಿಕವಾಗಿರುವ ಅಖಿಲ ಭಾರತ ಬಾರ್ ಕೌನ್ಸಿಲ್ ಪರೀಕ್ಷೆ ರದ್ದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಕೀಲರ ಸಂಘದ ಹೊಸಪೇಟೆ ಘಟಕದ ವತಿಯಿಂದ ವಕೀಲರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದ ಎಲ್ಲ ತಾಲ್ಲೂಕು ವಕೀಲರ ಸಂಘಗಳಿಗೆ ತಲಾ ₹5 ಲಕ್ಷ ಹಾಗೂ ಜಿಲ್ಲಾ ಸಂಘಗಳಿಗೆ ತಲಾ ₹10 ಲಕ್ಷ ಅನುದಾನ ನೀಡಬೇಕು, ಪೊಲೀಸರ ಏಕಪಕ್ಷೀಯ ವರ್ತನೆಯಿಂದ ವಕೀಲರಿಗೆ ರಕ್ಷಣೆ ನೀಡಬೇಕು, ಸರ್ಕಾರ ವಕೀಲರಿಗೆ ವೈದ್ಯಕೀಯ ಮತ್ತು ವಿಮಾ ಸೌಲಭ್ಯ ಒದಗಿಸಬೇಕು, ಪ್ರತಿ ಜಿಲ್ಲೆಯಲ್ಲಿ ಕಾನೂನು ಕಾಲೇಜು ಸ್ಥಾಪಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಹಶೀಲ್ದಾರ್ಗೆ ಸಲ್ಲಿಸಲಾಯಿತು. ಒಂದು ತಿಂಗಳೊಳಗೆ ಈ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಸಂಘದ ರಾಜ್ಯ ಸಮಿತಿ ಸದಸ್ಯರಾದ ಬಿಸಾಟಿ ಮಹೇಶ್ ಮತ್ತು ಎ.ಕರುಣಾನಿಧಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.