ಮೂಲಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಹೊಸಪೇಟೆ: ನಗರದ ಚಿತ್ತವಾಡ್ಗಿ ಹಾಗೂ ಸಿದ್ದಲಿಂಗಪ್ಪ ಚೌಕಿಯ ರಾಜಾಜಿನಗರದಲ್ಲಿ ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ನೇತೃತ್ವದಲ್ಲಿ ಸ್ಥಳೀಯರು ಮಂಗಳವಾರ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.
ನಂತರ ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಮನ್ಸೂರ್ ಅಹಮ್ಮದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಚಿತ್ತವಾಡ್ಗಿಯಲ್ಲಿ ಗುಣಮಟ್ಟದ ಒಳಚರಂಡಿ ನಿರ್ಮಿಸಬೇಕು. ಕೊಳವೆಬಾವಿ ಪಂಪ್ ಕೆಟ್ಟು ಹೋಗಿ ಅನೇಕ ತಿಂಗಳಾದರೂ ದುರಸ್ತಿಗೊಳಿಸಿಲ್ಲ. ಕೂಡಲೇ ಅದನ್ನು ದುರಸ್ತಿಗೊಳಿಸಬೇಕು. ಖಾಜ ನಗರದ ರೈಲ್ವೆ ಗೇಟ್ ಬಳಿ ರಸ್ತೆ ಉಬ್ಬು ನಿರ್ಮಿಸಬೇಕು. ಎಲ್ಲೆಡೆ ಬೀದಿ ದೀಪಗಳನ್ನು ಹಾಕಬೇಕು ಎಂದು ಆಗ್ರಹಿಸಿದರು.
ಸಿದ್ದಲಿಂಗಪ್ಪ ಚೌಕಿಯ ರಾಜಾಜಿನಗರದಲ್ಲಿ ಒಳಚರಂಡಿ ರಸ್ತೆ ವೈಜ್ಞಾನಿಕವಾಗಿ ಮಾಡಿಲ್ಲ. ಇದರಿಂದಾಗಿ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವುದರಿಂದ ಜನ ನಾನಾ ರೋಗಗಳಿಗೆ ಒಳಗಾಗುತ್ತಿದ್ದಾರೆ. ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ವಿ. ಸ್ವಾಮಿ, ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ, ಮುಖಂಡರಾದ ಕಲ್ಯಾಣಯ್ಯ, ಬಿಸಾಟಿ ಮಹೇಶ, ಎಚ್. ಮೊಹಮ್ಮದ್ ಖಾಲಿದ್, ಅಲ್ತಾಫ್, ಮಾಲ್ತೇಶ್, ಜೆ. ಶಿವಕುಮಾರ, ಬಂಡೆ ತಿರುಕಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.