ಬುಧವಾರ, ಮೇ 18, 2022
28 °C

ಹೊಸಪೇಟೆ: ಧರಣಿ ಸತ್ಯಾಗ್ರಹ 2ನೇ ದಿನಕ್ಕೆ, ಜನಪ್ರತಿನಿಧಿಗಳು ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ನಗರದಲ್ಲಿ ನಡೆಸುತ್ತಿರುವ ಧರಣಿ ಮಂಗಳವಾರ ಎರಡನೆ ದಿನಕ್ಕೆ ಕಾಲಿರಿಸಿದೆ.

ಕಾಂಗ್ರೆಸ್‌ ಪಕ್ಷದ ಮುಖಂಡರಾದ ವೆಂಕಟರಾವ್‌ ಘೋರ್ಪಡೆ, ಮೊಹಮ್ಮದ್‌ ಇಮಾಮ್‌ ನಿಯಾಜಿ, ರಾಜಶೇಖರ್‌ ಹಿಟ್ನಾಳ್‌ ಸೇರಿದಂತೆ ಇತರೆ ಸಂಘ ಸಂಸ್ಥೆಯವರು ಬೆಂಬಲ ಸೂಚಿಸಿ ಕೆಲಹೊತ್ತು ಧರಣಿಯಲ್ಲಿ ಪಾಲ್ಗೊಂಡಿದ್ದರು.

ನಗರಸಭೆ ಅಧ್ಯಕ್ಷೆ ಸುಂಕಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ ಸೇರಿದಂತೆ, ವಿವಿಧ ವಾರ್ಡಿನ ಸದಸ್ಯರು, ಕಮಲಾಪುರ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು