ಶಾಂತಿ, ಸೌಹಾರ್ದತೆ ಆಗ್ರಹಿಸಿ ಪ್ರತಿಭಟನೆ

ಹೊಸಪೇಟೆ (ವಿಜಯನಗರ): ಬಾಬ್ರಿ ಮಸೀದಿ ಮಾದರಿಯಲ್ಲೇ ಕಾಶಿಯ ಜ್ಞಾನವಾಪಿ ಮಸೀದಿಯನ್ನು ಧ್ವಂಸಗೊಳಿಸಿ ಶಾಂತಿ, ಸೌಹಾರ್ದತೆ ಕದಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿದ್ದು, ಅದನ್ನು ತಡೆಯುವಂತೆ ಆಗ್ರಹಿಸಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಂಘದ ಉಪಾಧ್ಯಕ್ಷ ನಜೀರ್ ಖಾನ್ ಮಾತನಾಡಿ, ಬಾಬ್ರಿ ಮಸೀದಿ ವಿನಾಶದ ರೀತಿಯಲ್ಲೇ ಜ್ಞಾನವಾಪಿ ಮಸೀದಿ ವಿಷಯ ಮಾಡಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಧರ್ಮದ ವಿಷಯದಲ್ಲಿ ಶಾಂತಿ, ಸೌಹಾರ್ದತೆ ಹಾಳು ಮಾಡುವ ಕುಕೃತ್ಯಗಳನ್ನು ನಿಯಂತ್ರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ವಲಿ ಬಾಷ, ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ, ಕಾರ್ಯದರ್ಶಿ ಇರ್ಫಾನ್ ಕಟಗಿ, ಸದ್ದಾಂ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.