ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ರಾಯಚೂರು ಜಿಲ್ಲೆಯ ವ್ಯಕ್ತಿ ಸಾವು, ಮೂವರಿಗೆ ಗಾಯ

Published 28 ಜೂನ್ 2023, 12:23 IST
Last Updated 28 ಜೂನ್ 2023, 12:23 IST
ಅಕ್ಷರ ಗಾತ್ರ

ಕಾನಹೊಸಹಳ್ಳಿ(ವಿಜಯನಗರಜಿಲ್ಲೆ): ಸಮೀಪದ ಬಣವಿಕಲ್ಲು ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದಗಣಿಯ ಮಹಮ್ಮದ್ ಉಸ್ಮಾನ್(25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚಾಲಕ ಸಮೀರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವೀಣ್ ಕುಮಾರ್, ಮಹಮ್ಮದ್ ಹಸನ್ ಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಕೂಡ್ಲಿಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದೆ.

ನಾಲ್ವರು ಸ್ನೇಹಿತರು ಬಾಬಾ ಬುಡನ್ ಗಿರಿ, ಚಿಕ್ಕಮಗಳೂರು ಭಾಗದಿಂದ ಪ್ರವಾಸ ಮುಗಿಸಿಕೊಂಡು‌ ಹಿಂತಿರುಗುವಾಗ ಚಾಲಕ‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT