ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಕಂಭಟ್ರಹಳ್ಳಿ ಸಮೀಪ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಒಡಿಶಾ ಮೂಲದ ಕಾರ್ಮಿಕರರೊಬ್ಬರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.

ಒಢಿಶಾದ ದಿವ್ಯಸುಂದರ ಮಲಿಕ್ (35) ಮೃತಪಟ್ಟ ಕಾರ್ಮಿಕ. ರೈಲು ಹಳಿಯಲ್ಲಿ ಕೇಬಲ್ ರಿಪೇರಿ ಮಾಡಲು ಗುತ್ತಿಗೆ ಪಡೆದಿದ್ದ ಕಂಪನಿ ಪರವಾಗಿ ಇವರು ಕೆಲಸ ಮಾಡುತ್ತಿದ್ದರು.

ಕಿವಿಗೆ ಮೊಬೈಲ್ ಹೆಡ್ ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದಾಗ ದಾವಣಗೆರೆಯಿಂದ ಬಳ್ಳಾರಿಯತ್ತ ಹೊರಟಿದ್ದ ರೈಲು ಡಿಕ್ಕಿ ಹೊಡೆಯಿತು, ಡಿಕ್ಕಿ ಹೊಡೆದ ರಭಸಕ್ಕೆ ಕಾರ್ಮಿಕನ ರುಂಡ, ಮುಂಡ ಚೆಲ್ಲಾಪಿಲ್ಲಿಯಾಗಿ ಬಿದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ. ದಾವಣಗೆರೆ ವಿಭಾಗದ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.