ಬುಧವಾರ, ಜೂನ್ 23, 2021
22 °C

ಬಿರುಗಾಳಿ ಸಮೇತ ಬಿರುಸು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಶುಕ್ರವಾರ ಸಂಜೆ ಬಿರುಸಿನ ಮಳೆಯಾಗಿದೆ.

ತಾಲ್ಲೂಕಿನ ಹಂಪಿ, ಕಮಲಾಪುರ, ಕಡ್ಡಿರಾಂಪುರ ಸುತ್ತಮುತ್ತ ಸಂಜೆ ಐದು ಗಂಟೆಗೆ ಬಿರುಗಾಳಿ ಸಮೇತ ಜೋರು ಮಳೆಯಾಗಿದೆ. ಗಂಟೆಗೂ ಹೆಚ್ಚು ಸಮಯ ಸತತ ವರ್ಷಧಾರೆಯಾಗಿದೆ. ಸಂಜೆ ಏಳು ಗಂಟೆ ವೇಳೆಗೆ ನಗರದಲ್ಲೂ ಮಳೆ ಸುರಿದಿದೆ. ರಾತ್ರಿ 8.15ರ ನಂತರವೂ ಜಿಟಿಜಿಟಿ ಮಳೆ ಮುಂದುವರೆದಿತ್ತು.

ಗುರುವಾರದಿಂದ ತಾಪಮಾನದಲ್ಲಿ ಹೆಚ್ಚಳವಾಗಿದ್ದರಿಂದ ಬಿಸಿಲು, ಸೆಕೆಯಿಂದ ಜನ ಬಳಲುತ್ತಿದ್ದರು. ಮಳೆಯಿಂದ ವಾತಾವರಣ ಸ್ವಲ್ಪ ತಂಪಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು