ಮಂಗಳವಾರ, ಅಕ್ಟೋಬರ್ 26, 2021
20 °C

ಹೊಸಪೇಟೆ: ಜಿಲ್ಲೆಯ ಹಲವೆಡೆ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧೆಡೆ ಬುಧವಾರ ಉತ್ತಮ ಮಳೆಯಾಗಿದೆ.

ನಗರದಲ್ಲಿ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಯಿತು. ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲೂ ಇದೇ ಪರಿಸ್ಥಿತಿ ಇತ್ತು. ಸತತ ಮಳೆ ಸುರಿದ ಕಾರಣ ವಾತಾವರಣ ಸಂಪೂರ್ಣ ತಂಪಾಗಿತ್ತು.

ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಳೆ ಬಿಡುವು ಕೊಟ್ಟಿತ್ತು. ಆದರೆ, ರಾತ್ರಿ ಪುನಃ ಮಳೆಯಾಗಿದೆ. ಬುಧವಾರ ಬೆಳಿಗ್ಗೆ ಆರಂಭಗೊಂಡ ಮಳೆ ಬಿಟ್ಟು ಬಿಟ್ಟು ಸಂಜೆಯ ವರೆಗೆ ಸುರಿದಿದೆ.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಧರ್ಮದಗುಡ್ಡ, ಕೊಂಡನಾಯಕನಹಳ್ಳಿ, ಗಾಳೆಮ್ಮನಗುಡಿ, ಕಡ್ಡಿರಾಂಪುರ, ಹಂಪಿ, ಕಮಲಾಪುರ, ಬುಕ್ಕಸಾಗರ, ವಡ್ಡರಹಳ್ಳಿ, ಪಾಪಿನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.