ಸೋಮವಾರ, ಮೇ 23, 2022
24 °C
ವಿಜಯನಗರ ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಉತ್ತಮ ಮಳೆ

ಹೂವಿನಹಡಗಲಿಯಲ್ಲಿ ಭಾರಿ ಮಳೆ: ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೃತ ಮಲ್ಲಿಕಾರ್ಜುನ, ಸುಮಂಗಲಮ್ಮ ದಂಪತಿ

ಹೂವಿನಹಡಗಲಿ/ಹೊಸಪೇಟೆ (ವಿಜಯನಗರ ಜಿಲ್ಲೆ): ಜಿಲ್ಲೆಯ ವಿವಿಧ ಕಡೆ ಮಂಗಳವಾರ ರಾತ್ರಿ ಬಿರುಸಿನ ಮಳೆಯಾಗಿದೆ.

ಹೂವಿನಹಡಗಲಿ ತಾಲ್ಲೂಕಿನಲ್ಲಿ ಮಂಗಳವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಪಶ್ಚಿಮ ಕಾಲ್ವಿ ಗ್ರಾಮದ ಬಳಿ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಮೋಟಾರ್ ಬೈಕ್  ಸಮೇತ ದಂಪತಿ ಕೊಚ್ಚಿ ಹೋಗಿರುವ ದಾರುಣ ಘಟನೆ ಜರುಗಿದೆ.

ಹಗರಿಬೊಮ್ಮನಹಳ್ಳಿ ತಾಲ್ಲೂಕು ಮುತ್ಕೂರು ಗ್ರಾಮದ ಮಲ್ಲಿಕಾರ್ಜುನ (55), ಸುಮಂಗಲಮ್ಮ (48) ಮೃತ ದಂಪತಿ. ಮುಂಡರಗಿ ತಾಲ್ಲೂಕಿನ ತಳಕಲ್ಲು ಗ್ರಾಮದ ಸಂಬಂಧಿಗಳ ಮಾತನಾಡಿಸಲು ಬೈಕ್‌ನಲ್ಲಿ ಹೋಗಿದ್ದ ದಂಪತಿ ರಾತ್ರಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ.

ರಾತ್ರಿ 10-30ರ ವೇಳೆಗೆ ಮುತ್ಕೂರಿನಲ್ಲಿರುವ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದ ಮಲ್ಲಿಕಾರ್ಜುನ, ಮಳೆ ಕಡಿಮೆಯಾದ ಮೇಲೆ ವಾಪಸ್ ಬರುವುದಾಗಿ ಹೇಳಿದ್ದರು. ಪೂರ್ವಕಾಲ್ವಿ-ಪಶ್ಚಿಮ ಕಾಲ್ವಿ ಗ್ರಾಮಗಳ ಮಧ್ಯದಲ್ಲಿ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನು ಬೈಕ್‌ನಲ್ಲಿ ದಾಟುವಾಗ ಕೊಚ್ಚಿ ಹೋಗಿದ್ದಾರೆ.

ಇದನ್ನೂ ಓದಿ: ವಿವಿಧೆಡೆ ಗುಡುಗು ಸಹಿತ, ಬಿರುಸಿನ ಮಳೆ

ಬುಧವಾರ ಬೆಳಿಗ್ಗೆ ಹಳ್ಳದಲ್ಲಿ ಬೈಕ್ ಬಿದ್ದಿರುವುದನ್ನು ಗಮನಿಸಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶೋಧ ನಡೆಸಿದಾಗ ಎರಡೂ ಶವಗಳು ಹಳ್ಳದಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ತಂಬ್ರಹಳ್ಳಿ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲೆಯ ಹೊಸಪೇಟೆ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರಿನಲ್ಲಿ ಉತ್ತಮ ಮಳೆಯಾಗಿದೆ. ಕುಂಠಿತಗೊಂಡಿದ್ದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು