ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂಳಿನ ಸಮಸ್ಯೆ ಬಗೆಹರಿಸಲು ಆಗ್ರಹ

Last Updated 14 ಮಾರ್ಚ್ 2022, 8:41 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ಮಣ್ಣು, ದೂಳಿನ ಸಮಸ್ಯೆ ಮಿತಿ ಮೀರಿದ್ದು, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಕೊನೆಗಾಣಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು. ಇದಕ್ಕೂ ಮುನ್ನ ವೇದಿಕೆಯ ಮುಖಂಡರು, ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಆಲಿಸಿದರು.

ರೈಲು ನಿಲ್ದಾಣ ರಸ್ತೆಯಲ್ಲಿರುವ ಭತ್ತ, ಕಬ್ಬಿನ ಜಮೀನಿನಲ್ಲಿ ರಿಯಲ್‌ ಎಸ್ಟೇಟ್‌ ಮಾಫಿಯಾಗಳು ಹಗಲು–ರಾತ್ರಿ ಗ್ರಾವೆಲ್‌ ಹಾಕಿಸುತ್ತಿದ್ದಾರೆ. ಇದರಿಂದ ಎಲ್ಲೆಡೆ ಮಣ್ಣು, ದೂಳು ಹರಡಿ ಸ್ಥಳೀಯರು ಉಸಿರಾಟ, ಕಣ್ಣಿನ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಇದನ್ನು ತಡೆಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ವೇದಿಕೆಯ ಜಿಲ್ಲಾ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT