ಹೊಸಪೇಟೆ (ವಿಜಯನಗರ): ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವು ಸಾವು, ನೋವು ಸಂಭವಿಸಿದ ಕಾರಣ ನೀಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಹೊಸಪೇಟೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಶನಿವಾರ ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಶ್ರೀನಾಥ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಕೊನೆಯಲ್ಲಿ ಉಪವಿಭಾಗಾಧಿಕಾರಿ ಪಿ.ವಿವೇಕಾನಂದ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಈ ಅಮಾನತು ಆದೇಶವನ್ನು ಹಿಂಪಡೆಯದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು.

ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್ಸಿಎ) ಆಡಳಿತ ಮಂಡಳಿಗಳು ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹಾಗೂ ನಿರ್ಬಂಧ ಹೇರಿ, ಪೊಲೀಸರ ಸಲಹೆಗಳನ್ನು ನಿರ್ಲಕ್ಷಿಸಿ. ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದರಿಂದ ಇಂತಹ ದುರ್ಘಟನೆ ನಡೆದಿದೆ. ಕಾಲ್ತುಳಿತದಲ್ಲಿ ಅಮಾಯಕ ಅಭಿಮಾನಿಗಳು ಬಲಿಯಾಗಿರುವುದಕ್ಕೆ ನಮ್ಮ ಸಂಘಟನೆ ವಿಷಾದ ವ್ಯಕ್ತಪಡಿಸುತ್ತದೆ. ಇಂತಹ ದುರ್ಘಟನೆಗಳು ನಡೆದ ಮೇಲೆ ಅದರ ಹೊಣೆಯನ್ನು ನಿಷ್ಠಾವಂತ ಅಧಿಕಾರಿಗಳ ಮೇಲೆ ಹೊರಿಸಿ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಯತ್ನಿಸುವುದು ಸರಿಯಲ್ಲ. ದಕ್ಷ ಅಧಿಕಾರಿಗಳನ್ನು ಹರಕೆಯ ಕುರಿಯನ್ನಾಗಿಸಿ ಅಮಾನತುಗೊಳಿಸಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಂತಹ ಮಹಾನಗರಗಳಲ್ಗಿ ಸಾರ್ವಜನಿಕವಾಗಿ ಯಾವುದೇ ಸಭೆ, ಸಮಾರಂಭಗಳನ್ನು ಆಯೋಜಿಸುವ ಸಂದರ್ಭದಲ್ಲಿ ಬಹಳಷ್ಟು ತಯಾರಿಗಳ ಅಗತ್ಯವಿದೆ. ಅದನ್ನು ಮಾಡದ ಸರ್ಕಾರ ಅಧಿಕಾರಿಗಳನ್ನು ತಲೆದಂಡ ಮಾಡಿದ್ದು ಒಂದು ಹೊಸಬಗೆಯ ಶೋಷಣೆಯಲ್ಲದೆ ಮತ್ತೇನೂ ಅಲ್ಲ. ಇಂತಹ ಅಸಹನೀಯ ಅನ್ಯಾಯವನ್ನು ಅಖಂಡ ಕರ್ನಾಟಕದ ಸಮಸ್ತ ವಾಲ್ಮೀಕಿ ಸಮುದಾಯ ಖಂಡಿಸುತ್ತದೆ ಎಂದು ತಿಳಿಸಲಾಗಿದೆ.

ವಾಲ್ಮೀಕಿ ನಾಯಕ ನಿವೃತ್ತ ಮತ್ತು ಸೇವಾನಿರತ ನೌಕರರ ಸಂಘ, ಜಾಗೃತ ನಾಯಕ ಬಳಗ, ಶ್ರೀ ವಾಲ್ಮೀಕಿ ಮಹಾ ಸಭಾ, ಶ್ರೀ ವಾಲ್ಮೀಕಿ ನಾಯಕ ಪದವೀಧರ ವಿದ್ಯಾವರ್ಧಕ ಸಂಘಗಳೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.