ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಯಾವ ರೀತಿಯ ಬದಲಾವಣೆ ಅಗತ್ಯವಿದೆ. ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು, ಆದರೆ ಅದಕ್ಕಿಂತ ಮೊದಲಾಗಿ ಜಿಲ್ಲೆಯಲ್ಲಿ ಕೈಗಾರಿಕೆ ಅಭಿವೃದ್ಧಿಗೊಳ್ಳಬೇಕಾದ ಅಗತ್ಯ ಇದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ. ಗೋವಿಂದರಾವ್ ಹೇಳಿದರು.

ಇಲ್ಲಿ ಬುಧವಾರ ಜಿಲ್ಲಾಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ, ಅದಕ್ಕಾಗಿ ಕೈಗಾರಿಕೆಗಳು ಇಲ್ಲಿ ಹೆಚ್ಚು ಹೆಚ್ಚು ಸ್ಥಾಪನೆಗೊಳ್ಳಬೇಕಿದೆ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದರು.

ಡಿ.ಎಂ.ನಂಜುಂಡಪ್ಪ ಅವರ 2002ರ ವರದಿಯಲ್ಲಿ ಅಂದಿನ 176 ತಾಲ್ಲೂಕುಗಳನ್ನು ಹಿಂದುಳಿದ, ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅಭಿವೃದ್ದಿ ಹೊಂದಿದ ತಾಲೂಕುಗಳೆಂದು ವರ್ಗೀಕರಿಸಿ ಅದಕ್ಕನುಗುಣವಾಗಿ ಅನುದಾನ ಹಂಚಿಕೆಗೆ ಶಿಫಾರಸ್ಸು ಮಾಡಿದ್ದರು. ಈ ವರದಿ ಅನುಷ್ಠಾನದಿಂದ ಹೇಗೆ ಅಭಿವೃದ್ದಿಯಾಗಿದೆ ಎಂಬುದನ್ನು ಸೂಚ್ಯಂಕದ ಅಧಾರದ ಮೇಲೆ ಗುರುತಿಸಲಾಗುತ್ತದೆ ಎಂದು ಅವರು ಹೇಳಿದರು.

ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿ, ಕೂಡ್ಲಿಗಿ ಕ್ಷೇತ್ರದಲ್ಲಿ ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ನುರಿತ ಶಿಕ್ಷಕರ ನೇಮಕವಾಗಬೇಕಿದೆ ಎಂದರು.

ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ ಮಾತನಾಡಿ, ಉದ್ಯೋಗಕ್ಕಾಗಿ ಬೇರೆ ಕಡೆ ಸ್ಥಳೀಯರು ಹೋಗುವುದನ್ನು ತಡೆಯಬೇಕಿದೆ. ನಗರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ನಮ್ಮಲ್ಲಿ 38 ತಾಂಡಗಳಿವೆ. ತಾಂಡಗಳ ಅಭಿವೃದ್ದಿಯಾಗಬೇಕು ಎಂದರು.

ಹೊಸಪೇಟೆ ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ಜಿಲ್ಲೆಯ ಅರ್ಥಿಕ ಅಭಿವೃದ್ದಿಗೆ ಪ್ರವಾಸೋದ್ಯಮದ ಬಹಳ ಮುಖ್ಯವಾಗಿದೆ. ಪ್ರವಾಸಿತಾಣ ಹಂಪಿ ಸೇರಿ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸೇರಿ ವಿವಿಧ ಕಾರ್ಖನೆಗಳನ್ನು ಸ್ಥಾಪಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಸಮಿತಿಯ ಸದಸ್ಯರಾದ ಎಸ್.ಟಿ.ಬಾಗಲಕೋಟೆ, ಸಂಗೀತಾ ಕಟ್ಟಿ ಇದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.