ಹೊಸಪೇಟೆ (ವಿಜಯನಗರ): ಸಾಮಾಜಿಕ ಹೊಣೆಗಾರಿಕೆ ಎಂಬುದು ಸಂಶೋಧನೆಗೆ ಮಾತ್ರವಲ್ಲದೆ ಸಮಾಜದ ಯಾವುದೇ ಕ್ಷೇತ್ರದಲ್ಲಿರುವ ಅಥವಾ ಯಾವುದೇ ವೃತ್ತಿಯಲ್ಲಿ ತೊಡಗಿರುವ ಪ್ರತಿಯೊಬ್ಬರಿಗೂ ಇರಬೇಕಾದ ಜವಾಬ್ದಾರಿ ಹಾಗೂ ಪದ್ಧತಿಯಾಗಿದೆ ಎಂದು ವಿಮರ್ಶಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ.ಬಂಜಗೆರೆ ಜಯಪ್ರಕಾಶ್ ಹೇಳಿದರು.

ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಮಂಗಳವಾರ ಅಧ್ಯಯನಾಂಗದ ವತಿಯಿಂದ ಆಯೋಜಿಸಲಾಗಿದ್ದ ಯುಜಿಸಿ ಪಿಎಚ್.ಡಿ. ಕೋರ್ಸ್ವರ್ಕ್ ಎರಡನೇ ಹಂತದ ಕಾರ್ಯಕ್ರಮದಲ್ಲಿ ‘ಸಂಶೋಧನೆ ಮತ್ತು ಸಾಮಾಜಿಕ ಹೊಣೆಗಾರಿಕೆ’' ವಿಷಯದ ಮೇಲೆ ಅವರು ಮಾತನಾಡಿದರು.

‘ಸಂಶೋಧಕರು ಸಂಶೋಧನೆಯನ್ನು ಹವ್ಯಾಸವಾಗಿ ರೂಢಿಸಿಕೊಳ್ಳಬೇಕು. ಕೇವಲ ಪದವಿಗಾಗಿ ಸಂಶೋಧನೆ ಕೈಗೊಳ್ಳಬಾರದು’ ಎಂದು ಕಿವಿಮಾತು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ. ಜೆ.ಎಂ.ನಾಗಯ್ಯ ಮಾತನಾಡಿ, ಸಂಶೋಧನೆಯಲ್ಲಿ ಹೊಸ ವಿಷಯವನ್ನು ಕಂಡುಹಿಡಿದರೆ ಅದು ಆವಿಷ್ಕಾರವಾಗುತ್ತದೆ. ಇಲ್ಲಿ ಯಾವುದೇ ಒಂದು ವಿಷಯ ತನ್ನಷ್ಟಕ್ಕೆ ಸ್ವತಂತ್ರವಾಗಿರುವುದಿಲ್ಲ; ಅವು ಸಮಾಜಕ್ಕೆ ಸಂಬಂಧಿಸಿದ ಮನುಷ್ಯರಿಂದಲೇ ಜನ್ಮ ತಾಳಿವೆ ಎಂದರು.

ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಯನಾಂಗದ ನಿರ್ದೇಶಕ ಪ್ರೊ.ಅಮರೇಶ ಯತಗಲ್ ಅವರು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.