ಹೊಸಪೇಟೆ (ವಿಜಯನಗರ): ‘ತಾರತಮ್ಯಕ್ಕೆ ಒಳಗಾದವರ ಮೀಸಲಾತಿ ರಕ್ಷಿಸುವ ಜೊತೆಗೆ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ವಿಸ್ತರಿಸಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐಎಂ) ಜಿಲ್ಲಾ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ ಆಗ್ರಹಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಳಸಮುದಾಯಗಳ ವಿರುದ್ಧವಾಗಿ ಕೆಲಸ ನಿರ್ವಹಿಸುತ್ತಿವೆ. ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ನೀತಿಗಳು ಮೀಸಲಾತಿ ಸೌಲಭ್ಯಗಳನ್ನು ವ್ಯಾಪಕವಾಗಿ ಕಿತ್ತುಕೊಂಡಿವೆ ಎಂದು ಭಾನುವಾರ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ದುರ್ಬಲರ ಶಿಕ್ಷಣ ಹಕ್ಕನ್ನು ಕಿತ್ತುಕೊಳ್ಳುತ್ತಿದೆ. ಖಾಲಿ ಇರುವ ಲಕ್ಷಾಂತರ ಸರ್ಕಾರಿ ನೌಕರಿಗಳನ್ನು ತುಂಬದೇ ಗುತ್ತಿಗೆ ಆಧಾರದಲ್ಲಿ ಕಡಿಮೆ ವೇತನಕ್ಕೆ ದುಡಿಸಿಕೊಳ್ಳುವ ಲೂಟಿಕೋರ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ. ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್ ಕಂಪನಿಗಳಿಗೆ ವಹಿಸಿಕೊಡುತ್ತಿರುವುದರಿಂದ ಸಾರ್ವಜನಿಕರು ಉದ್ಯೋಗ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದಿದ್ದಾರೆ.

ಸರ್ಕಾರ ತಳಸಮುದಾಯದವರ ಕಷ್ಟಕ್ಕೆ ಸ್ಪಂದಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ವಿರುದ್ಧ ಇರುವ ಉದಾಸೀನ ನೀತಿಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.