ಹೊಸಪೇಟೆ (ವಿಜಯನಗರ): ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಕಾಯಂ ಶಿಕ್ಷಕರು/ ನೌಕರರು ಸೌಲಭ್ಯಗಳಿಂದ ವಂಚಿತರಾಗಿದ್ದು, ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಸಿಬ್ಬಂದಿ ಬೆಂಗಳೂರಿನಲ್ಲಿ ನಡೆಸಿದ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಕಾರಣ ಜಿಲ್ಲೆಯ ಎಲ್ಲ ವಸತಿ ಶಾಲೆಗಳಲ್ಲಿ ಗುರುವಾರ ಶಾಲಾ ಆರಂಭೋತ್ಸವದ ಸಂದರ್ಭದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದರು.

‘ಬೇಡಿಕೆ ಈಡೇರವರೆಗೂ ನಿರಂತರವಾಗಿ ಹೋರಾಟ ಮುಂದುವರಿಯಲಿದೆ. ಶುಕ್ರವಾರ ತರಗತಿ ತೆಗೆದುಕೊಳ್ಳದೆ ಅಸಹಕಾರ ಚಳವಳಿ ನಡೆಯಲಿದೆ. ಶನಿವಾರ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಜೂನ್ 2ರಂದು ಡಿ.ಸಿ ಕಚೇರಿ ಬಳಿ ಧರಣಿ ನಡೆಸಲಾಗುವುದು’ ಎಂದು ವಸತಿ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಇ. ತಿಳಿಸಿದ್ದಾರೆ.

ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ, ಎಸ್.ಟಿ, ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು, ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು, ಶೇ 10 ವಿಶೇಷ ಭತ್ಯೆ ನೀಡಬೇಕು ಎಂಬ ಪ್ರಮುಖ ಬೇಡಿಕೆಯನ್ನು ಸಿಬ್ಬಂದಿ ಸರ್ಕಾರದ ಮುಂದಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.