ಕೂಡ್ಲಿಗಿ (ವಿಜಯನಗರ ಜಿಲ್ಲೆ): ಹಂಪಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರೊಂದು ಸೇತುವ ತಡೆಗೋಡೆಗೆ ಡಿಕ್ಕಿಯಾಗಿ ಬೆಂಗಳೂರಿನ ಪ್ರೀತಿ(35) ಮತ್ತು ಅವರ ಪುತ್ರ ಯಶ್ವಿತ್ (1ವರ್ಷ 10 ತಿಂಗಳು) ಮೃತಪಟ್ಟು, ಇತರ ಏಳು ಮಂದಿ ಗಾಯಗೊಂಡ ಘಟನೆ ಭಾನುವಾರ ಸಂಜೆ ತಾಲ್ಲೂಕಿನ ಬಣವಿಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.

ಬೆಂಗಳೂರು ನಿವಾಸಿ ಮೋಹನ್ ಕುಮಾರ್ ಅವರು ತಮ್ಮ ಕುಟುಂಬ ಹಾಗೂ ಸಂಬಂಧಿಕರೊಂದಿಗೆ ಮಂತ್ರಾಲಯಕ್ಕೆ ತೆರಳಿ, ವಾಪಸ್ ಬರುತ್ತ ಹಂಪಿ ನೋಡಿಕೊಂಡು ಊರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕಾನಹೊಸಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮೋಹನ್ ಕುಮಾರ್ ಕಾರು ಚಾಲನೆ ಮಾಡುತ್ತಿದ್ದರು. ಅಪಘಾತದಲ್ಲಿ ಅವರ ಪುತ್ರ ಯಶ್ಚಿತ್ ಸ್ಥಳದಲ್ಲೇ ಮೃತಪಟ್ಟರು. ಅವರ ಪತ್ನಿ ಪ್ರೀತಿ ಅವರನ್ನು ಕೂಡ್ಲಿಗಿ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟರು. ಗಾಯಗೊಂಡಿರುವ ಮೋಹನ್ ಕುಮಾರ್, ರಾಧಾ, ಮರಿರಂಗಯ್ಯ, ರೂಪಾ, ಲಕ್ಷ್ಮೀದೇವಿ, ಚರಿತ್ ಹಾಗೂ ಮಿಥುನ್ ಅವರು ಚಿತ್ರದುರ್ಗ ಮತ್ತು ದಾವಣಗೆರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.