ಹೊಸಪೇಟೆ: ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ

ಹೊಸಪೇಟೆ (ವಿಜಯನಗರ): ಜಿಲ್ಲಾ ಖನಿಜ ನಿಧಿಯ ಅನುದಾನದಲ್ಲಿ ಸೋಗಿ ಮಾರುಕಟ್ಟೆಯಿಂದ ಕನಕದಾಸ ವೃತ್ತದ ವರೆಗಿನ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುರುವಾರ ನಗರದಲ್ಲಿ ಚಾಲನೆ ನೀಡಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ಮಾಜಿ ಹುಡಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
‘ಲಾಕ್‌ಡೌನ್ ಬಹುತೇಕ ತೆರವುಗೊಳಿಸಿರುವುದರಿಂದ ಮತ್ತೆ ಅಭಿವೃದ್ಧಿ ಕಾಮಗಾರಿಗಳು ಚುರುಕುಗೊಂಡಿವೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ವಿಶೇಷ ಕಾಳಜಿಯಿಂದಾಗಿ ನಗರದ ಎಲ್ಲ ರಸ್ತೆಗಳು ಅಭಿವೃದ್ಧಿ ಕಾಣುತ್ತಿವೆ. ವಾಹನಗಳ ಸುಗಮ ಸಂಚಾರ ಸಾಧ್ಯವಾಗಲಿದೆ’ ಎಂದು ಅಯ್ಯಾಳಿ ತಿಮ್ಮಪ್ಪ ಹೇಳಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ಕುಮಾರ್ ಮಾತನಾಡಿ, ‘2020-21ನೇ ಸಾಲಿನ ಜಿಲ್ಲಾ ಖನಿಜ ನಿಧಿ ಅನುದಾನದ ಅಡಿಯಲ್ಲಿ ಸೋಗಿ ಮಾರುಕಟ್ಟೆಯಿಂದ ಕನಕದಾಸ ವೃತ್ತದ ವರೆಗೆ ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ₹60 ಲಕ್ಷ ವೆಚ್ಚದಲ್ಲಿ ಮಾಡಲಾಗುವುದು’ ಎಂದು ತಿಳಿಸಿದರು.
ಸಚಿವ ಆನಂದ್ ಸಿಂಗ್ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.