ಹೊಸಪೇಟೆ (ವಿಜಯನಗರ): ‘ಪಂಚ ಗ್ಯಾರಂಟಿ’ಗಳ ಅನುಷ್ಠಾನದ ಜತೆಜತೆಗೆ ಎರಡು ವರ್ಷ ಪೂರೈಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆಗೆ ಸೇರಿದ್ದ ಲಕ್ಷಾಂತರ ಜನಸ್ತೋಮದ ಹರ್ಷೋದ್ಗಾರದ ಮಧ್ಯೆಯೇ, ಅರ್ಹರಿಗೆ ಭೂಮಿ ಹಕ್ಕು ಪತ್ರ ನೀಡುವ ನೀಡುವ ‘ಭೂ ಗ್ಯಾರಂಟಿ’ ಯೋಜನೆಗೆ ಚಾಲನೆ ನೀಡಲಾಯಿತು.

‘ಪ್ರಗತಿಯತ್ತ ಕರ್ನಾಟಕ–ಸಮರ್ಪಣೆ ಸಂಕಲ್ಪ’ ಘೋಷವಾಕ್ಯದಡಿ ಮಂಗಳವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರನೇ ಗ್ಯಾರಂಟಿಯ ಜಾರಿಯ ಕ್ಷಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಾಕ್ಷಿಯಾದರು.

ಪುನೀತ್ ರಾಜ್ಕುಮಾರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಹಟ್ಟಿ, ಹಾಡಿ, ಕೇರಿ, ತಾಂಡಾ, ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಭೂಹಕ್ಕುಪತ್ರ ವಿತರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಲಕ್ಷಾಂತರ ಜನರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಆಯ್ದ 40 ಕುಟುಂಬಗಳಿಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಹಕ್ಕುಪತ್ರಗಳನ್ನು ವಿತರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ‘2015–16ರ ಅವಧಿಯಲ್ಲಿ ಹಕ್ಕಪತ್ರ ನೀಡುವ ಸಂಬಂಧ ನಾನು ಸಮಿತಿ ರಚಿಸಿದ್ದೆ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಹೊಲದೊಡೆಯ ಎಂಬ ಕಾಯ್ದೆ ತಂದಂತೆ, ವಾಸಿಸುವವನೇ ಮನೆಯೊಡೆಯ ಎಂಬ ಧ್ಯೇಯದೊಂದಿಗೆ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೆ. ಅದರ ಫಲವೇ ಇಂದು 1.11 ಲಕ್ಷ ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನುಳಿದ 50 ಸಾವಿರ ಕುಟುಂಬಗಳಿಗೆ 6 ತಿಂಗಳಲ್ಲಿ ಹಕ್ಕುಪತ್ರ ನೀಡಲಾಗುವುದು’ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ನಗರ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ 7ನೇ ಗ್ಯಾರಂಟಿ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುತ್ತೇವೆ. ಜನರ ಖಾತೆಗಳನ್ನು ಸರಿಪಡಿಸಿ, ಅವರ ಸ್ವತ್ತಿಗೆ ದಾಖಲೆ ಸಿದ್ಧಪಡಿಸಿ, ವಾಸಸ್ಥಳವನ್ನು ಅಧಿಕೃತಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದೇವೆ’ ಎಂದರು. ‘ಎಲ್ಲಿಯವರೆಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುತ್ತದೋ ಅಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳು ಇದ್ದೇ ಇರುತ್ತವೆ’ ಎಂದು ದೃಢವಾಗಿ ಹೇಳಿದರು.

ಬೆಳಿಗ್ಗೆ 11ರಿಂದ ಮಧ್ಯಾಹ್ನದವರೆಗೆ ನಡೆದ ಸಮಾವೇಶದಲ್ಲಿ ನಿರಂತರ ಮಳೆ ಸುರಿಯಿತು. ‘ಮಳೆಯು ನಮ್ಮನ್ನು ಹರಿಸಿದೆ. ಇದೆಲ್ಲವೂ ಪ್ರಗತಿ ಲಕ್ಷಣ’ ಎಂದ ಕಾಂಗ್ರೆಸ್ ನಾಯಕರು ಹೇಳಿದರು. ಇದೇ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರ ಪ್ರತಿಮೆ ಅನಾವರಣಗೊಳಿಸಲಾಯಿತು. ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.

ಹಟ್ಟಿ, ಹಾಡಿ, ಕೇರಿ, ತಾಂಡಾ, ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಸಮಾವೇಶದಲ್ಲಿ ಭೂಹಕ್ಕುಪತ್ರ ವಿತರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಲಕ್ಷಾಂತರ ಜನರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಆಯ್ದ 40 ಕುಟುಂಬಗಳಿಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಹಕ್ಕುಪತ್ರಗಳನ್ನು ವಿತರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ‘2015–16ರ ಅವಧಿಯಲ್ಲಿ ಹಕ್ಕುಪತ್ರ ನೀಡುವ ಸಂಬಂಧ ನಾನು ಸಮಿತಿ ರಚಿಸಿದ್ದೆ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಹೊಲದೊಡೆಯ ಎಂಬ ಕಾಯ್ದೆ ತಂದಂತೆ, ವಾಸಿಸುವವನೇ ಮನೆಯೊಡೆಯ ಎಂಬ ಧ್ಯೇಯದೊಂದಿಗೆ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೆ. ಅದರ ಫಲವೇ ಇಂದು 1.11 ಲಕ್ಷ ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನುಳಿದ 50 ಸಾವಿರ ಕುಟುಂಬಗಳಿಗೆ 6 ತಿಂಗಳಲ್ಲಿ ಹಕ್ಕುಪತ್ರ ನೀಡಲಾಗುವುದು’ ಎಂದರು.

ಬೆಳಿಗ್ಗೆ 11ರಿಂದ ಮಧ್ಯಾಹ್ನದವರೆಗೆ ನಡೆದ ಸಮಾವೇಶದಲ್ಲಿ ನಿರಂತರ ಮಳೆ ಸುರಿಯಿತು. ‘ಮಳೆಯು ಪ್ರಗತಿ ಲಕ್ಷಣ’ ಎಂದ ಕಾಂಗ್ರೆಸ್ ನಾಯಕರು ಹೇಳಿದರು. ಇದೇ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರ ಪ್ರತಿಮೆ ಅನಾವರಣಗೊಳಿಸಲಾಯಿತು. ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.

ನಾವು ನುಡಿದಂತೆ ನಡೆದಿದ್ದೇವೆ. ಕೇಂದ್ರ ಸರ್ಕಾರ ನುಡಿದಂತೆ ನಡೆದಿಲ್ಲ. ರಾಜ್ಯದ ಜನ ಇದೆಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಈಗ 2000 ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದೆ. ಇನ್ನೂ 500 ಕಂದಾಯ ಗ್ರಾಮಗಳನ್ನು ಗುರುತಿಸುವುದು ಬಾಕಿ ಇದೆ. ಅದನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು.
– ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಲೋಕಸಭೆ

ಕೇಂದ್ರ ಸರ್ಕಾರವು ಬರೀ ಭರವಸೆಗಳನ್ನು ನೀಡುತ್ತಿದೆಯೇ ಹೊರತು ಜನರ ಪರ ಯಾವುದೇ ಯೋಜನೆ ಅನುಷ್ಠಾನಕ್ಕೆ ತಂದಿಲ್ಲ. ಬಡ ಜನಸಾಮಾನ್ಯರ ಬಗ್ಗೆ ಕಾಳಜಿಯೂ ಹೊಂದಿಲ್ಲ.
–ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.