ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧ ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ 15 ಸಂತ್ರಸ್ತರಿಗೆ ಜಾತಿ ನಿಂದನೆ, ಹಲ್ಲೆ, ಲೈಂಗಿಕ ಕಿರುಕುಳಿಗೆ ಸಂಬಂಧಿಸಿ ಒಟ್ಟು ₹ 26.55 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಇಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಿವೆ. ಕಳೆದ 3 ತಿಂಗಳಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಹೊಸಪೇಟೆ ತಾಲ್ಲೂಕಿನಲ್ಲಿ 5, ಹರಪನಹಳ್ಳಿ, ಕೂಡ್ಲಿಗಿಗಳಲ್ಲಿ ತಲಾ 1, ಹಡಗಲಿ ತಾಲ್ಲೂಕಿನಲ್ಲಿ 2 ಮತ್ತು ಡಿಸಿಆರ್ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 4 ಪ್ರಕರಣ ಸೇರಿ ಒಟ್ಟು 13 ಪ್ರಕರಣ ದಾಖಲಾಗಿವೆ. 7 ಪ್ರಕಾರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. ಇನ್ನೂ ಉಳಿದವುಗಳು ತನಿಖಾ ಹಂತದಲ್ಲಿ ಬಾಕಿ ಇವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕಳೆದ 3 ತಿಂಗಳಲ್ಲಿ ಹೊಸಪೇಟೆ ತಾಲ್ಲೂಕಿನಲ್ಲಿ ದಾಖಲಾದ 2 ಪ್ರಕರಣ, ಕೂಡ್ಲಿಗಿ ತಾಲೂಕಿನಲ್ಲಿ ಡಿಸಿ ಆರ್ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2 ಪ್ರಕರಣ ಸೇರಿ ಒಟ್ಟು 5 ಪ್ರಕರಣಗಳಿಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2025 ಡಿಸೆಂಬರ್ನಿಂದ ಮಾರ್ಚ್ 18ರವರೆಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಖಲಾದ 97 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದ್ದು, ಯಾವುದೇ ಪ್ರಕರಣಗಳು ಇತ್ಯರ್ಥವಾಗಿರುವುದಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ದೌರ್ಜನ್ಯ ತಡೆ ಕಾಯ್ದೆ ಕುರಿತು ಜಿಲ್ಲಾದ್ಯಂತ ನಿರಂತರವಾಗಿ ಜಾಗೃತಿ ಕಾರ್ಯಾಗಾರ, ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆದರೂ ಇಂತಹ ಪ್ರಕರಣಗಳು ದಾಖಲಾಗುತ್ತಿರುವುದು ಬೇಸರದ ಸಂಗತಿ ಎಂದರು.

ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳನ್ನು ವಿಳಂಬ ಮಾಡದೆ ತನಿಖೆ ನಡೆಸಿ, ನಿಗದಿತ ಅವಧಿಯೊಳಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು. ಸಂತ್ರಸ್ತರಿಗೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಧನವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಅಲ್ಲಲ್ಲಿ ಕೇಳಿಬರುತ್ತಿರುವ ಅಸ್ಪೃಶ್ಯತೆ ಆಚರಣೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಪಿಡುಗುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಇಂತಹ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಎ.ಕಾಳೆ ಇದ್ದರು.

Highlights - ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಜಾಗೃತಿ ಕಾರ್ಯಕ್ರಮ ನಡೆಸಿ ಎಸ್ಸಿ, ಎಸ್ಟಿ ಕಾಲೊನಿಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಸ್ಥಳೀಯ ಆಡಳಿತ ಸಂಸ್ಥೆಗಳು ಎಚ್ಚರ ವಹಿಸಲು ಸಲಹೆ

Quote - ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಕವಿತಾ ಎಸ್. ಮನ್ನಿಕೇರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.