ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟೂರು: ಶಾಲಾ ಬಸ್‌ಗೆ ಬೆಂಕಿ; ತಪ್ಪಿದ ಅನಾಹುತ

Published 15 ಜೂನ್ 2023, 13:06 IST
Last Updated 15 ಜೂನ್ 2023, 13:06 IST
ಅಕ್ಷರ ಗಾತ್ರ

ಕೊಟ್ಟೂರು: ಖಾಸಗಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಹಾಗೂ ಶಾಲಾ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲ್ಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಗುರುವಾರ ನಡೆದಿದೆ.

ಪಟ್ಟಣದ ತರಳಬಾಳು ಶಿಕ್ಷಣ ಸಂಸ್ಥೆಯ ಶಾಲಾ ವಾಹನ ಹರಪನಹಳ್ಳಿ ತಾಲ್ಲೂಕಿನ ಬೆಣ್ಣಿಹಳ್ಳಿಯಿಂದ ಪಟ್ಟಣಕ್ಕೆ ಬರುವಾಗ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ವಾಹನದ ಯಂತ್ರದಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡ ತಕ್ಷಣ ಚಾಲಕ ಮತ್ತು ಸಿಬ್ಬಂದಿ ಮಕ್ಕಳನ್ನು ತಕ್ಷಣ ವಾಹನದಿಂದ ಇಳಿಸಿರುವುದರಿಂದ ಭಾರೀ ಅನಾಹುತ ತಪ್ಪಿದೆ.

ಬಸ್‌ನಲ್ಲಿ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು, ಚಾಲಕ ಹಾಗೂ ಸಹಾಯಕ ಸೇರಿದಂತೆ ಒಟ್ಟು 50 ಜನ ಸುರಕ್ಷಿತವಾಗಿದ್ದಾರೆ ಎಂದು ಸಿಪಿಐ ವೆಂಕಟಸ್ವಾಮಿ ತಿಳಿಸಿದರು.

ಸದರಿ ಸಂಸ್ಥೆಯ ಇನ್ನೊಂದು ಬಸ್‌ನಲ್ಲಿ ವಿದ್ಯಾರ್ಥಿಗಳನ್ನು ಅವರವರ ಊರುಗಳಿಗೆ ವಾಪಾಸ್ ಕಳುಹಿಸಿಕೊಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್ ತಿಳಿಸಿದರು.

ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೊಟ್ಟೂರು ತಾಲ್ಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಸುಟ್ಟು ನಿಂತ ಖಾಸಗಿ ಶಾಲಾ ಬಸ್‌
ಕೊಟ್ಟೂರು ತಾಲ್ಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಸುಟ್ಟು ನಿಂತ ಖಾಸಗಿ ಶಾಲಾ ಬಸ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT