ಕೂಡ್ಲಿಗಿ (ವಿಜಯನಗರ ಜಿಲ್ಲೆ): ಶಾಲಾ ವಾಹನ ಡಿಕ್ಕಿಯಾಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಕೊಟ್ಟೂರು ರಸ್ತೆಯಲ್ಲಿ ಸೋಮವಾರ ನಡೆದಿದೆ.
ಕೆ.ಮುನಿಯಪ್ಪ(56) ಮೃತ ಶಿಕ್ಷಕ.
ತಾಲ್ಲೂಕಿನ ಅಮ್ಮನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಪ್ರತಿ ದಿನ ಕೊಟ್ಟೂರು ಪಟ್ಟಣದಿಂದ ಬಂದು ಹೋಗುತ್ತಿದ್ದರು. ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿ ಮೇಲ್ವಿಚಾರಣೆಗೆ ನೇಮಕ ಗೊಂಡಿದ್ದರು. ಇದಕ್ಕಾಗಿ ಬೆಳಿಗ್ಗೆ 8.30ರ ಸುಮಾರಿಗೆ ಕೊಟ್ಟೂರಿನಿಂದ ಕೂಡ್ಲಿಗಿ ಕಡೆ ತಮ್ಮ ಬೈಕ್ ನಲ್ಲಿ ಬರುತ್ತಿದ್ದಾಗ ಕುಪ್ಪಿನಕರೆ ಕ್ರಾಸ್ ಬಳಿ ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿದೆ. ಇದರಿಂದ ಶಿಕ್ಷಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಶವವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲಿಸಿದ್ದಾರೆ.
ಮೃತರು ಹರಪನಹಳ್ಳಿ ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದವರು.