ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯುನಗರ | ಮಳೆಯಿಂದ ಮೂರು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ

Published 25 ಜುಲೈ 2023, 2:27 IST
Last Updated 25 ಜುಲೈ 2023, 2:27 IST
ಅಕ್ಷರ ಗಾತ್ರ

ಹೊಸಪೇಟೆ :  ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುತ್ತಿದ್ದು, ಹರಪನಹಳ್ಳಿ, ಹೂವಿನಹಡಗಲಿ ಮತ್ತು ಕೂಡ್ಲಿಗಿ ತಾಲ್ಲೂಕುಗಳಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರು ಮಂಗಳವಾರ ಬೆಳಿಗ್ಗೆ ಆದೇಶ ಹೊರಡಿಸಿದ್ದು, ಈ ದಿನ ರಜೆಯಿಂದ ಬೋಧನೆಯ ಮೇಲೆ ಆಗುವ ನಷ್ಟವನ್ನು ಇದೇ 30ರಂದು ಶಾಲೆ ನಡೆಸುವ ಮೂಲಕ ಸರಿದೂಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಡಿಡಿಪಿಐ ಜಿ.ಕೊಟ್ರೇಶ್‌ ಅವರು ಸಹ ಈ ಮೂರು ತಾಲ್ಲೂಕುಗಳ ಬಿಇಒಗಳಿಗೆ ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ರಜೆ ನೀಡುವ ಕುರಿತು ಸೂಚನೆ ನೀಡಿದ್ದಾರೆ.

ಹೊಸಪೇಟೆ ನಗರದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT