ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Last Updated 1 ಏಪ್ರಿಲ್ 2022, 13:16 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಧರ್ಮದ ಹೆಸರಿನಲ್ಲಿ ಜನರ ನಡುವೆ ದ್ವೇಷ ತುಂಬಿ ಶಾಂತಿ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ನಜೀರ್ ಖಾನ್ ಮಾತನಾಡಿ, ಸಮಾಜದ ಸೌಹಾರ್ದವನ್ನು ಕದಡುತ್ತಿರುವ ಸಮಾಜಘಾತುಕ ಶಕ್ತಿಗಳನ್ನು ಸರ್ಕಾರ ಮಟ್ಟ ಹಾಕಬೆಕು. ಆದರೆ, ಜನಪ್ರತಿನಿಧಿಗಳೇ ಪ್ರಚೋದನಕಾರಿ ಹೇಳಿಕೆ ಕೊಡುತ್ತಿದ್ದಾರೆ. ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವ ವಾತಾವರಣ ಸೃಷ್ಟಿಸಿ ಕೋಮು ಸಂಘರ್ಷಕ್ಕೆ ಆರ್‌ಎಸ್‌ಎಸ್‌ ಇಂಬು ನೀಡುತ್ತಿದೆ. ಸಂಘದ ಮುಖಂಡರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಅಧ್ಯಕ್ಷ ವಲಿಬಾಷಾ, ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ, ಇರ್ಫಾನ್ ಕಟಗಿ, ರಫೀಕ್, ಇಬ್ರಾಹಿಂ, ಸಮೀರ್, ಷರೀಫ್, ಶೋಯಬ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT