ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Last Updated 12 ಏಪ್ರಿಲ್ 2022, 9:40 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಿರಂತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ವಲಿಬಾಷ ಮಾತನಾಡಿ, ಕೋವಿಡ್ ಕಾರಣದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರ್ವಜನಿಕರಿಗೆ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಾತು ಮಾತಿಗೆ ಡಬಲ್ ಎಂಜಿನ್ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿಯವರು ತೈಲ ದರದ ಜೊತೆಗೆ ಔಷಧಿ, ಕೀಟನಾಶಕ, ಕೃಷಿ ಯಂತ್ರೋಪಕರಣ ಮೇಲಿನ ತೆರಿಗೆ ಹೆಚ್ಚಳ ಮಾಡಿ ಜನರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ. 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಹೇಳುವುದರ ಮೂಲಕ ಕೋಮುದ್ವೇಷಕ್ಕೆ ನಿರಂತರ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಅರಾಜಕತೆ ಸೃಷ್ಟಿಸುತ್ತಿದೆ. ಆರ್ಥಿಕ ಸಂಕಷ್ಟದಿಂದ ದೇಶವು ದಿವಾಳಿ ಆಗುವ ಮುಂಚೆ ಸರ್ಕಾರ ಎಚ್ಚೆತ್ತುಕೊಂಡು ಕಡಿವಾಣ ಹಾಕಬೇಕು ಎಂದು ಹಕ್ಕೊತ್ತಾಯ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT