ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ| ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋದ ರೈತನಿಗಾಗಿ ಹುಡುಕಾಟ

Last Updated 2 ಆಗಸ್ಟ್ 2022, 8:30 IST
ಅಕ್ಷರ ಗಾತ್ರ

ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು): ಭಾರಿ ಮಳೆಗೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ಜಿ. ನಾಗಲಾಪುರ ಗ್ರಾಮದ ರೈತ ಉಂಚಟ್ಟಿ ಬೊಮ್ಮಪ್ಪ (62) ಕೊಚ್ಚಿಕೊಂಡು ಹೋಗಿದ್ದಾರೆ.

ಮಧ್ಯಾಹ್ನ ಹಳ್ಳದಲ್ಲಿ ನೀರಿನ ಹರಿವು ಸ್ವಲ್ಪ ತಗ್ಗಿದ್ದರಿಂದ ಬೊಮ್ಮಪ್ಪ ಅವರು ಹಳ್ಳದಾಟಿಕೊಂಡು ಹೊಲಕ್ಕೆ ಹೋಗುತ್ತಿದ್ದರು. ಈ ವೇಳೆ ನೀರಿನ ಸೆಳವಿಗೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಕಂದಾಯ ನಿರೀಕ್ಷಕ ಅಂದಾನಗೌಡ, ಗ್ರಾಮಲೆಕ್ಕಿಗ ಬಸವರಾಜ, ಪಿ.ಡಿ.ಒ ರಾಘವೇಂದ್ರ, ಕೃಷಿ ಅಧಿಕಾರಿ ಶಿವಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಹುಡುಕಾಟ ಮುಂದುವರೆದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಹುಡುಕಾಟ ತೀವ್ರಗೊಳಿಸಿದ್ದಾರೆ
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಹುಡುಕಾಟ ತೀವ್ರಗೊಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT