ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪರೀಕ್ಷೆ: 67 ಜಾಗೃತ ದಳ ರಚನೆ

ಅವಳಿ ಜಿಲ್ಲೆ 34 ಕೇಂದ್ರಗಳಲ್ಲಿ ಪರೀಕ್ಷೆ
Last Updated 21 ಏಪ್ರಿಲ್ 2022, 14:53 IST
ಅಕ್ಷರ ಗಾತ್ರ

ಹೊಸಪೇಟೆ: ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರದಿಂದ (ಏ.22) ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೇ 18ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿವೆ. ವಿಜಯನಗರದಲ್ಲಿ 18, ಬಳ್ಳಾರಿ ಜಿಲ್ಲೆಯ 16 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ. 30,647 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ. ಅಕ್ರಮ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಡಬೇಕು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಅಕ್ರಮ ತಡೆಗೆ 67 ವಿಶೇಷ ಜಾಗೃತ ದಳ ರಚಿಸಲಾಗಿದೆ.

ಬಳ್ಳಾರಿ ತಾಲ್ಲೂಕಿನಲ್ಲಿ 9,747, ಕಂಪ್ಲಿಯಲ್ಲಿ 828, ಕುರುಗೋಡು 558, ಸಂಡೂರು 1,508, ಸಿರುಗುಪ್ಪ 2,088 ವಿದ್ಯಾರ್ಥಿಗಳು ಸೇರಿದಂತೆ ಬಳ್ಳಾರಿ ಜಿಲ್ಲೆಯಲ್ಲಿ 14,729 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದಾರೆ. ಹೊಸಪೇಟೆಯಲ್ಲಿ 4,322, ಹಗರಿಬೊಮ್ಮನಹಳ್ಳಿ 1,720, ಹೂವಿನಹಡಗಲಿ 1,745, ಹರಪನಹಳ್ಳಿ 3,689, ಕೂಡ್ಲಿಗಿ 1,495, ಕೊಟ್ಟೂರು 2,947 ಸೇರಿದಂತೆ ವಿಜಯನಗರ ಜಿಲ್ಲೆಯಲ್ಲಿ 15,918 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT