ಪ್ರಜಾವಾಣಿ ವಾರ್ತೆ

ಹೂವಿನಹಡಗಲಿ: ‘ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದ ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಿಸಿ’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಭೀಮಪ್ಪ ಲಾಳಿ ಅವರು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ 112 ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳು ನಡೆದಿವೆ. ಬಹುತೇಕ ಕಡೆ ಕಾಮಗಾರಿ ಅರೆಬರೆಯಾಗಿವೆ. ಅವೈಜ್ಞಾನಿಕವಾಗಿ ಕೆಲಸ ಮಾಡಿದ್ದಾರೆ. ಪೈಪ್ ಲೈನ್ ಹಾಕಲು ಕೆಲವೆಡೆ ಸಿಸಿ ರಸ್ತೆಗಳನ್ನು ಅಗೆದು ದುರಸ್ತಿಗೊಳಿಸದೇ ಬಿಟ್ಟಿದ್ದಾರೆ. 10 ದಿನದೊಳಗೆ ಎಲ್ಲ ಕಾಮಗಾರಿಗಳನ್ನು ಪರಿಶೀಲಿಸಿ, ಗುತ್ತಿಗೆದಾರರಿಂದ ತಕ್ಷಣ ದುರಸ್ತಿ ಕೆಲಸ ಮಾಡಿಸಬೇಕು. ನಿರ್ಲಕ್ಷಿಸುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ, ಕ್ರಮ ಜರುಗಿಸಿ’ ಎಂದು ಹೇಳಿದರು.

‘ದುಂಗಾವತಿ ತಾಂಡಾದಲ್ಲಿ ಜೆಜೆಎಂ ಕಾಮಗಾರಿಯನ್ನು ಅರೆಬರೆ ಮಾಡಿದ್ದ ಬಾಗಲಕೋಟೆ ಮೂಲದ ಗುತ್ತಿಗೆದಾರ ಸದಾಶಿವ ಪತ್ತಾರ ಎಂಬುವವರಿಗೆ ಏಳು ಬಾರಿ ನೋಟಿಸ್ ಕೊಟ್ಟಿದ್ದರೂ ಅವರಿಂದ ಉತ್ತರ ಬಂದಿರಲಿಲ್ಲ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ’ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಅಂಬೇಡ್ಕರ್ ಸನಗುಂದ ಸಭೆಗೆ ತಿಳಿಸಿದರು.

‘ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಶೇ 96 ರಷ್ಟು ಸಾಧನೆಯಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.