ಶನಿವಾರ, ಸೆಪ್ಟೆಂಬರ್ 25, 2021
22 °C

ನಿವೃತ್ತ ಪ್ರಾಧ್ಯಾಪಕರಿಗೆ ಬೀಳ್ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರದ ವಿಜಯನಗರ ಕಾಲೇಜಿನಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಪ್ರಾಧ್ಯಾಪಕರಿಗೆ ಸೋಮವಾರ ಆಡಳಿತ ಮಂಡಳಿಯಿಂದ ಸರಳವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಭೌತಶಾಸ್ತ್ರ ವಿಭಾಗದ ಬಸಣ್ಣ ಡಿಗ್ಗಿ, ಕನ್ನಡ ಭಾಷಾ ವಿಭಾಗದ ಲಕ್ಷ್ಮಣ್ ಎಂ. ಕರಿಭೀಮಣ್ಣನವರ್ ಅವರಿಗೆ ಆಡಳಿತ ಮಂಡಳಿಯ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ ಅವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಪ್ರಾಧ್ಯಾಪಕ ಕಾಯಕವನ್ನು ಅಚ್ಚುಕಟ್ಟಾಗಿ ನೆರವೇರಿಸಿ ಕಾಲೇಜಿಗೂ, ಆಡಳಿತ ಮಂಡಳಿಗೆ ಹೆಸರು ತಂದುಕೊಟ್ಟಿದ್ದಾರೆ. ಇವರ ನಿವೃತ್ತಿ ಜೀವನ ಸುಖಕರವಾಗಿರಲಿ’ ಎಂದು ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಸಣ್ಣ ಡಿಗ್ಗಿ, ಲಕ್ಷ್ಮಣ್ ಎಂ.ಕರಿಭೀಮಣ್ಣನವರ್, ‘ಕಾಲೇಜಿನಲ್ಲಿ ಮುಕ್ತವಾಗಿ ಪಾಠ ಪ್ರವಚನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಸೇವಾ ಅವಧಿಯ ದಿನಗಳಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ಟಿದ್ದರು. ಕೋವಿಡ್19 ನಡುವೆಯೂ ಕಾಲೇಜು ಆಡಳಿತ ಮಂಡಳಿ ನಮಗೆ ಸತ್ಕರಿಸಿ ಬೀಳ್ಕೊಡುತ್ತಿರುವುದು ಖುಷಿಯ ಸಂಗತಿ’ ಎಂದರು.

ಪದವಿ ಕಾಲೇಜು ಪ್ರಾಂಶುಪಾಲ ವಿ.ಎಸ್.ಪ್ರಭಯ್ಯ, ಪ್ರಾಧ್ಯಾಪಕರಾದ ಸುಭಾಷ್.ಟಿ, ಉಮಾಮಹೇಶ್ವರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು