ಹೊಸಪೇಟೆ (ವಿಜಯನಗರ): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಕಟುವಾಗಿ ಖಂಡಿಸಿರುವ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್ಐ) ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ವಿಜಯನಗರ ಕಾಲೇಜಿನ ಎದುರು ಸೇರಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅತ್ಯಾಚಾರ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹಕ್ಕೊತ್ತಾಯ ಮಾಡಿದರು.

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಅತ್ಯಾಚಾರ ಘಟನೆಗಳು ನಡೆಯುತ್ತಿವೆ. ಇದನ್ನು ತಡೆಯಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರಲ್ಲೂ ಪ್ರವಾಸಿ ತಾಣಗಳಲ್ಲಿ ಯುವತಿಯರ ಮೇಲೆ ಅತ್ಯಾಚಾರ ಹೆಚ್ಚಾಗಿ ನಡೆಯುತ್ತಿವೆ. ನಿಜಕ್ಕೂ ಇದು ಕಳವಳಕಾರಿ ವಿಷಯ. ಸರ್ಕಾರ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ಮಾರುತಿ, ಉಪಾಧ್ಯಕ್ಷ ಕೆ.ಎ. ಪವನಕುಮಾರ್, ತಾಲ್ಲೂಕು ಅಧ್ಯಕ್ಷ ಜೆ. ಶಿವುಕುಮಾರ, ವಿದ್ಯಾರ್ಥಿಗಳಾದ ಜಯಾ, ಟಿ. ಸಿತಾರಾ, ಕಾವ್ಯಾಂಜಲಿ, ಪಿಯೂಷಾ, ಎ. ಉಷಾ, ಪಿ.ಎಚ್. ಸುನೀಲ್, ಸುಧಾಕರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.