ಹೊಸಪೇಟೆ (ವಿಜಯನಗರ): ಹಂಪಿ ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್‌ನಿಂದ ಭಾನುವಾರ ನಗರದಲ್ಲಿ ಛತ್ರಪತಿ ಶಾಹು ಮಹಾರಾಜ್ ಜಯಂತಿ ಆಚರಿಸಲಾಯಿತು.

ಟ್ರಸ್ಟ್ ಅಧ್ಯಕ್ಷ ಪ್ರೊ. ಚಿನ್ನಸ್ವಾಮಿ ಸೋಸಲೆ ಅವರು ಶಾಹು ಮಹಾರಾಜ್‌ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ‘ಭಾರತದಲ್ಲಿ ಸಮ ಸಂಸ್ಕೃತಿಯ ಪ್ರತಿಪಾದನೆ ಮಾಡಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಅಧಿಕಾರ ನಡೆಸಿದವರು ಶಾಹು ಮಹಾರಾಜರು. ತಳಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಜಾರಿಗೆ ತಂದರು’ ಎಂದು ಸ್ಮರಿಸಿದರು.

‘ಶಾಹು ಮಹಾರಾಜ್ ಅವರ ಕ್ರಾಂತಿಕಾರಕ ಹೆಜ್ಜೆಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಹಿಂದುಳಿದ ಸಮುದಾಯದವರು ಮೇಲೆ ಬರಲು ಸಾಧ್ಯವಾಯಿತು. ಹೀಗಾಗಿ ತಳಸಮುದಾಯದವರು ಸದಾ ಶಾಹು ಮಹಾರಾಜರನ್ನು ಸ್ಮರಿಸಬೇಕು’ ಎಂದು ತಿಳಿಸಿದರು. ಕಾರ್ಯದರ್ಶಿ ಸೋಮಶೇಖರ್ ಬಣ್ಣದಮನೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.