ಹೊಸಪೇಟೆ (ವಿಜಯನಗರ): ಇಲ್ಲಿನ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.

ಮೃತರನ್ನುಕೊಪ್ಪಳದ ಗುಡ್ಲನೂರಿನ ಗೌಸ್ ಸಾಬ್ ದಸ್ತಗೀರ ಸಾಬ್ ಎಂದು ಗುರುತಿಸಲಾಗಿದೆ. ಎರಡು ವರ್ಷಗಳಿಂದ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಅವರು ಮಲಗಿದ ವೇಳೆ ದುಷ್ಕೃತ್ಯ ಎಸಗಿರುವ ಸಾಧ್ಯತೆ ಇದೆ. ಘಟನೆಗೆ ಇನ್ನಷ್ಟೇ ಕಾರಣ ಗೊತ್ತಾಗಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಿಗ್ಗೆ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳು ವಿಷಯ ತಿಳಿದು ಗಾಬರಿಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.