ಬುಧವಾರ, ಏಪ್ರಿಲ್ 21, 2021
30 °C

ವಿಜಯನಗರ: ಮೃತ್ಯುಂಜೇಶ್ವರ ದೇಗುಲದಲ್ಲಿ ಶಿವರಾತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ‘ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಗರದ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಅಪ್ಪಣ್ಣ ತಿಳಿಸಿದರು.

‘ಮಾ.11ರಂದು ಬೆಳಿಗ್ಗೆ ಪಂಚಾಮೃತ, ರುದ್ರಾಭಿಷೇಕ, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಡೆಯಲಿದೆ. ಸಂಜೆ 6ಕ್ಕೆ ಸ್ಥಳೀಯ ಕಲಾವಿದರು, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮರುದಿನ ಅನ್ನಸಂತರ್ಪಣೆ ನಡೆಯಲಿದೆ. ಈ ವರ್ಷ ವಿಶೇಷವಾಗಿ ಜ್ಯೋತಿರ್ಲಿಂಗ ಅಭಿಷೇಕ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಭಕ್ತರೇ ಸ್ವಹಸ್ತದಿಂದ ಕ್ಷೀರಾಭಿಷೇಕ ಮಾಡಬಹುದು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ದೇವಸ್ಥಾನ ಸಮಿತಿಯ ಚಂದ್ರಕಾಂತ್ ಕಾಮತ್, ವೇದಮೂರ್ತಿ, ಗೋಪಾಲ ಪೈ, ಮಧುಸೂದನ್, ದೇವದಾಸ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು