ಕುಡತಿನಿ (ತೋರಣಗಲ್ಲು) : ಇಲ್ಲಿನ ಬಳ್ಳಾರಿ ಬೈಪಾಸ್ ರಸ್ತೆಯಲ್ಲಿನ ಪೆಟ್ರೋಲ್ ಬಂಕ್ ಬಳಿ ಶಾರ್ಟ್ ಸರ್ಕಿಟ್ ಸಂಭವಿಸಿ ಲಾರಿ ಹೊತ್ತಿ ಉರಿದು, ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕೂಡಲೇ ಸ್ಥಳಕ್ಕೆ ತೆರಳಿ ಬಳ್ಳಾರಿ ಹಾಗೂ ಬಿಟಿಪಿಎಸ್ ಘಟಕದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೊಸದರೋಜಿ ಗ್ರಾಮದ ಬಾಷಾಸಾಬ್ ಅವರಿಗೆ ಸೇರಿದ ಲಾರಿ ಇದಾಗಿದೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.