ಮಂಗಳವಾರ, ಸೆಪ್ಟೆಂಬರ್ 27, 2022
27 °C

ಶ್ರಾವಣ ಸೋಮವಾರ: ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭಕ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಎರಡನೇ ಶ್ರಾವಣ ಸೋಮವಾರದ ಅಂಗವಾಗಿ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರನಿಗೆ ಸೋಮವಾರ ವಿಶೇಷ ಪೂಜೆ ನೆರವೇರಿಸಲಾಯಿತು.

ಹಂಪಿ ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿರೂಪಾಕ್ಷೇಶ್ವರ ದೇವರಿಗೆ ಅಭಿಷೇಕ ಮಾಡಿ, ಹೂಗಳಿಂದ ಅಲಂಕರಿಸಿ, ಆರತಿ ಮಾಡಿ ವಿಶೇಷವಾಗಿ ಪೂಜೆ ಸಲ್ಲಿಸಿದರು.

ಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ನೆರೆಯ ಕೊಪ್ಪಳ, ದಾವಣಗೆರೆ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಂದ ಭಕ್ತರು ಬಂದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ತುಂತುರು ಮಳೆ ಲೆಕ್ಕಿಸದೇ ಹಂಪಿ ಪರಿಸರದಲ್ಲಿ ಓಡಾಡಿ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ತುಂಗಭದ್ರಾ ನದಿ ಹರಿಯುವ ಸುಂದರ ದೃಶ್ಯ ನೋಡಿ ಪುಳಕಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು