ಹೊಸಪೇಟೆ(ವಿಜಯನಗರ): ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಮನೆಗಳ್ಳನನ್ನು ಬಂಧಿಸಿ, ಆತನಿಂದ ₹6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆ ಕನಕಗಿರಿಯ ಹುಲುಸನಹಟ್ಟಿ ಗ್ರಾಮದ ವ್ಯಕ್ತಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇಲ್ಲಿನ ಸಿರಸಿನಕಲ್ಲು ಪ್ರದೇಶದಲ್ಲಿ ಮನೆಯ ಬೀಗ ಒಡೆದು ಕಳ್ಳತನ ಮಾಡಿ ಬಳಿಕ ಅವುಗಳನ್ನು ಮಾರಾಟ ಮಾಡಲು ಬಂದಾಗ ಗಸ್ತಿನಲ್ಲಿದ್ದ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಬಂಧಿತ ವ್ಯಕ್ತಿ ತಾಲ್ಲೂಕಿನ ಕಲ್ಲಹಳ್ಳಿ, ಕಮಲಾಪುರ, ಕೆರೆತಾಂಡದ 4 ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.
ಎಲ್ಲಾ ಪ್ರಕರಣಗಳಿಗೆ ಸಂಬಂಧಪಟ್ಟಂತೆ ₹5.85 ಲಕ್ಷ ಮೊತ್ತದ ಚಿನ್ನ, ₹15 ಸಾವಿರ ಮೊತ್ತದ 300 ಗ್ರಾಂ ಬೆಳ್ಳಿ ಆಭರಣ ಸೇರಿ 6 ಲಕ್ಷ ಮೌಲ್ಯದ ಆಭರಣ ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಶ್ರೀನಿವಾಸ ಮೇಟಿ, ಸಿಬ್ಬಂದಿ ಬಿ.ರಾಘವೇಂದ್ರ, ತಿಪ್ಪೇಸ್ವಾಮಿ, ಸುಭಾಷ್, ಕೊಟ್ರೇಶ್, ಪ್ರಕಾಶ್, ನಾಗರಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.