ಹೊಸಪೇಟೆ (ವಿಜಯನಗರ): ರಾಜ್ಯದ ಕೊಳೆಗೇರಿ ನಿವಾಸಿಗಳ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಇದೇ 13ರಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಇಮ್ತಿಯಾಜ್ ಆರ್.ಮಾನ್ವಿ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳೆಗೇರಿ ನಿವಾಸಿಗಳ ಕಷ್ಟದ ಅನುಭವ ಇಲ್ಲದ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರನ್ನು ಕೂಡಲೇ ಕೈಬಿಡಬೇಕು ಎಂದರು.

ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ, ನೋಂದಣಿ, ಇ ಖಾತಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಬೇಕು, ಖಾಸಗಿ ಸ್ಲಂಗಳ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆ ಸುತ್ತೋಲೆಯನ್ನ ಹಿಂದಕ್ಕೆ ಪಡೆಯಬೇಕು, ಮುಂದಿನ ಬಜೆಟ್ನಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಕೊಳೆಗೇರಿಗಳ ಸಮಗ್ರ ಅಭಿವೃದ್ಧಿಗೆ ₹500 ಕೋಟಿ ಅನುದಾನ ಮೀಸಲಿಡಬೇಕು, ರಾಜ್ಯದಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ಕೊಳೆಗೇರಿ ನಿವಾಸಿಗಳಿಗೆ ನಿರ್ಮಿಸುತ್ತಿರುವ ವಸತಿ ಸಮುಚ್ಛಯಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಸಾವಿತ್ರಿ ಬಾಯಿ ಫುಲೆ ಮಹಿಳಾ ಸಂಘಟನೆಯ ಜಿಲ್ಲಾ ಸಂಚಾಲಕಿ ವೆಂಕಮ್ಮ, ರಾಜ್ಮಾಬಿ, ಶಿವಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.