ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಂಪಿ ಉತ್ಸವ: ವಿಶೇಷ ಬಸ್ ವ್ಯವಸ್ಥೆ

Published 30 ಜನವರಿ 2024, 15:22 IST
Last Updated 30 ಜನವರಿ 2024, 15:22 IST
ಅಕ್ಷರ ಗಾತ್ರ

ಹೊಸಪೇಟೆ: ಹಂಪಿ ಉತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಹಿತದೃಷ್ಠಿಯಿಂದ ನಿಗಮವು ಬಸ್ ವ್ಯವಸ್ಥೆ ಮಾಡಿದ್ದು, ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಿಂದ ಕಡ್ಡಿರಾಂಪುರ ಕ್ರಾಸ್-ಹಂಪಿ- ಕಮಲಾಪುರ- ಕಡ್ಡಿರಾಂಪುರ ಕ್ರಾಸ್ ಮಾರ್ಗವಾಗಿ ದುಂಡು ಸುತ್ತುಗಳಲ್ಲಿ ಉಚಿತ ಬಸ್‍ಗಳು ಕಾರ್ಯಾಚರಣೆ ಮಾಡಲಿವೆ.

ಈ ಬಸ್‍ಗಳಲ್ಲಿ 5 ಹಸಿರು ಬಣ್ಣದ ಬಸ್‍ಗಳನ್ನು ಮಹಿಳೆಯರಿಗಾಗಿ ಮೀಸಲಿರಿಸಲಾಗಿದೆ. ಫೆ.2ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 2023-24ನೇ ಸಾಲಿನಲ್ಲಿ 50 ಇತರೆ ಪ್ರವಾಸಿ ಗೈಡ್‍ಗಳಿಗೆ 3 ತಿಂಗಳ ಕಾಲ ತರಬೇತಿ ಹಾಗೂ ಜಲಪಾತ, ಅರಣ್ಯಧಾಮ, ಪರಿಸರಧಾಮ ಇನ್ನಿತರೆ ಪ್ರಾಕೃತಿಕ ನೈಸರ್ಗಿಕ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸಲು 50 ನೇಚರ್ ಗೈಡ್‍ಗಳಿಗೆ 2 ತಿಂಗಳ ಕಾಲ ತರಬೇತಿ ಸೇರಿದಂತೆ ಒಟ್ಟು 100 ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲಾಗುತ್ತದೆ.

ಆಸಕ್ತರು ಪ್ರವಾಸೋದ್ಯಮ ಇಲಾಖೆಯಲ್ಲಿ ಫೆ.5ರಿಂದ ಅರ್ಜಿ ಪಡೆದುಕೊಂಡು, ಫೆ.29ರೊಳಗೆ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪ್ರವಾಸೋದ್ಯಮ ಇಲಾಖೆ, ಲೋಟಸ್ ಮಹಲ್ ಹತ್ತಿರ, ಕಮಲಾಪುರ ಕಚೇರಿ ದೂ.ಸಂಖ್ಯೆ: 08394-295640ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT