ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: ಜಿಲ್ಲೆಯಲ್ಲಿ 65 ಪರೀಕ್ಷಾ ಕೇಂದ್ರಗಳು

ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ ಸಿಇಒ
Published 22 ಫೆಬ್ರುವರಿ 2024, 16:21 IST
Last Updated 22 ಫೆಬ್ರುವರಿ 2024, 16:21 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 65 ಕೇಂದ್ರಗಳನ್ನು ನಿಗದಿಪಡಿಸಲಾಗಿದ್ದು, ಎರಡು ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ಅವರು ಮಂಗಳವಾರ ಇಲ್ಲಿ ಪರೀಕ್ಷೆ ಸಿದ್ಧತೆ ಕುರಿತು ನಡೆಸಿದ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.

ಈ ವರ್ಷ 21,768 ಮಂದಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಸಮಯದಲ್ಲಿ ಸಿ.ಸಿ.ಟಿ.ವಿ ಸೇರಿದಂತೆ ಯಾವುದೇ ಮೂಲಸೌಕರ್ಯಗಳಿಗೆ ಕೊರತೆಯಾಗದಂತೆ ಅತ್ಯಂತ ಸುವ್ಯಸ್ತವಾಗಿ ಪರೀಕ್ಷೆಗೆ ವ್ಯವಸ್ಥೆ ಮಾಡಬೇಕು ಎಂದು ಸಿಇಒ  ಅವರು ಸೂಚಿಸಿದರು.

ಮಾರ್ಚ್ 1ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗಳನ್ನು ಕೂಡ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಸಿಇಒ ಅವರು ಸೂಚನೆ ನೀಡಿದರು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೌಚಾಲಯಗಳು ಸೇರಿದಂತೆ ಮೂಲಸೌಕರ್ಯಗಳ ವಿವರಗಳನ್ನು ಪಡೆದು ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆ ಕೇಂದ್ರಗಳನ್ನಾಗಿ ಗುರುತಿಸಿರುವ ಶಾಲೆಗಳಲ್ಲಿ ಪೀಠೋಪಕರಣಗಳು, ಶೌಚಾಲಯಗಳ ಸ್ಥಿತಿ-ಗತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಿದರು. ಏನಾದರೂ ಅವಶ್ಯಕತೆ ಇದ್ದಲ್ಲಿ ಎಲ್ಲವನ್ನೂ ಸರಿಪಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಡಿಡಿಪಿಐ ಯುವರಾಜ್ ನಾಯಕ್,  ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಿಯುಸಿ ವಿಭಾಗದ ನೋಡಲ್ ಅಧಿಕಾರಿ ನಾಗರಾಜ ಹವಾಲ್ದಾ, ಬಾಚಿಗೊಂಡನಹಳ್ಳಿ ಪಿಯು ಕಾಲೇಜಿನ ಪ್ರಾಂಶುಪಾಲ ನಾಗಲಿಂಗ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT