ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಕುರುಬ–ಮಾದಿಗ ಯುವಕರ ನಡುವೆ ಜಗಳ, ಕಲ್ಲು ತೂರಾಟ

Last Updated 9 ಮಾರ್ಚ್ 2023, 19:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕ್ಷುಲ್ಲಕ ಕಾರಣಕ್ಕಾಗಿ ಕುರುಬರು ಹಾಗೂ ಮಾದಿಗ ಸಮಾಜದ ಯುವಕರ ನಡುವೆ ಜಗಳ ನಡೆದಿದ್ದು, ಎರಡೂ ಕಡೆಯ ಗುಂಪಿನವರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಆಸ್ತಿ ಹಾನಿಗೊಳಿಸಿರುವ ಘಟನೆ ತಾಲ್ಲೂಕಿನ ಹಳೆ ಮಲಪನಗುಡಿಯಲ್ಲಿ ಗುರುವಾರ ನಡೆದಿದೆ.

ಘಟನೆಯಲ್ಲಿ ಎರಡು ಸಮುದಾಯದವರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಮನೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನ ಸೇರಿದಂತೆ ಇತರೆ ವಸ್ತುಗಳಿಗೂ ಹಾನಿಯಾಗಿದೆ.

‘ಬುಧವಾರ ಹೋಳಿ ಹಬ್ಬದ ಸಂದರ್ಭದಲ್ಲಿ ಕುರುಬ ಹಾಗೂ ಮಾದಿಗ ಸಮಾಜದ ಇಬ್ಬರು ಯುವಕರ ನಡುವೆ ಸಣ್ಣ ಜಗಳವಾಗಿತ್ತು. ಗುರುವಾರ ಎರಡು ಕಡೆಯವರು ಪುನಃ ಜಗಳವಾಡಿದ್ದಾರೆ. ಕೆಲ ಮನೆಗಳ ಮೇಲೆ ಕಲ್ಲು ಎಸೆದು ಹಾನಿ ಉಂಟು ಮಾಡಿದ್ದಾರೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT