ಶುಕ್ರವಾರ, ಫೆಬ್ರವರಿ 26, 2021
30 °C

ಬೀದಿನಾಯಿಗಳ ದಾಳಿ, ಬಾಲಕನಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ನಗರದ ರಾಣಿಪೇಟೆಯಲ್ಲಿ ಎರಡು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ.

ಫೆ. 20ರಂದು ಈ ಘಟನೆ ನಡೆದಿದೆ. ‘ರಾಜು ಮನೆ ಮುಂದೆ ಆಟ ಆಡುತ್ತಿರುವಾಗ ಬೀದಿ ನಾಯಿಗಳು ದಾಳಿ ನಡೆಸಿವೆ. ಹೊಟ್ಟೆ, ಸೊಂಟಕ್ಕೆ ನಾಯಿಗಳು ಕಚ್ಚಿವೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯವಿಲ್ಲ’ ಎಂದು ಅವರ ತಾಯಿ ಪೂರ್ಣಿಮಾ ತಿಳಿಸಿದ್ದಾರೆ.

‘ರಾಣಿಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿವೆ. ಜನರ ಮೇಲೆ ಎರಗಿ ಬೀಳುತ್ತಿವೆ. ದ್ವಿಚಕ್ರ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತಿವೆ. ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ಅವುಗಳ ಹಾವಳಿ ತಡೆಗೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.