ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮರಸ್ಯ ಕದಡುವವರ ವಿರುದ್ಧ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

Last Updated 16 ಮಾರ್ಚ್ 2022, 12:15 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಕೆಲವು ಕಿಡಿಗೇಡಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಗೋಡೆಗಳ ಮೇಲೆ ಹಿಜಾಬ್ ವಿಷಯವಾಗಿ ಬರೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಸಮಾಜದಲ್ಲಿ ಸಾಮರಸ್ಯ ಕದಡಲು ಪ್ರಯತ್ನ ಮಾಡಿರುವವರ ಮೇಲೆ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ತಿಳಿಸಿದ್ದಾರೆ.

‘ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚಿಸಿರುವೆ. ಕೃತ್ಯ ಎಸಗಿದವರ ವಿರುದ್ಧ ಕ್ರಮಕ್ಕೆ ಸೂಚನೆ ಕೊಟ್ಟಿರುವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT