ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಧರಣಿ ನಿರತ ವಿದ್ಯಾರ್ಥಿಗೆ ಸೋಮವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಯಿತು.

ಅಭಿವೃದ್ಧಿ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಯರ್ರಿಸ್ವಾಮಿ ಆಸ್ಪತ್ರೆಗೆ ದಾಖಲಾದವರು. 47 ತಿಂಗಳ ಫೆಲೋಶಿಪ್ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿ ಗಳು ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಭವನದ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕೊರೆಯುವ ಚಳಿ ಲೆಕ್ಕಿಸದೆ ವಿದ್ಯಾರ್ಥಿಗಳು ಪಟ್ಟು ಬಿಡದೆ ಧರಣಿ ಮಾಡುತ್ತಿದ್ದಾರೆ. ಸೋಮವಾರ ತಡರಾತ್ರಿ ಯರ್ರಿಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಆಂಬುಲೆನ್ಸ್ ಕರೆಸಿಆಸ್ಪತ್ರೆಗೆ ಕಳಿಸಲಾಯಿತು.

ಡಿಸೆಂಬರ್ 8ರಂದು ನುಡಿಹಬ್ಬ ನಡೆಯಲಿದ್ದು, ಅದಕ್ಕೆ ಸಿದ್ಧತೆ ನಡೆಯುತ್ತಿದೆ. ಇನ್ನೊಂದೆಡೆ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.