ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಗಳ ವಿರುದ್ಧ ಎಸ್‌ಯುಸಿಐ ಪ್ರತಿಭಟನೆ

Published 2 ಮಾರ್ಚ್ 2024, 16:16 IST
Last Updated 2 ಮಾರ್ಚ್ 2024, 16:16 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಶನಿವಾರ ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.

‘ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡ ದೊಡ್ಡ ಘೋಷಣೆಗಳೊಂದಿಗೆ ಜನರನ್ನು ಮರಳು ಮಾಡಿ ಮತ ಪಡೆಯುವ ರಾಜಕೀಯ ಪಕ್ಷಗಳು, ಗೆದ್ದ ನಂತರ ತಾವು ನೀಡಿದ ಭರವಸೆಗಳಿಂದ ‘ಚುನಾವಣಾ ಜುಮ್ಲಾ’ ಎಂದು ಹೇಳಿ ಜಾರಿಕೊಳ್ಳುತ್ತಿವೆ.  ಭಿನ್ನ ರಾಜಕೀಯ ಪಕ್ಷಗಳ ಪ್ರಣಾಳಿಕೆಗಳು ಬೇರೆ ಬೇರೆಯಂತೆ ಕಂಡರೂ ಕಾರ್ಪೋರೇಟ್ ಉದ್ಯಮಪತಿಗಳ ಸೇವೆಯಲ್ಲಿ ಕಿಂಚಿತ್ತೂ ಕುಂದುಕೊರತೆ ಉಂಟಾಗುವುದಿಲ್ಲ’ ಎಂದು ಜಿಲ್ಲಾ ಸಮಿತಿ ಸದಸ್ಯ ಎ.ದೇವದಾಸ್‌ ಹೇಳಿದರು.

ಜಿಲ್ಲಾ ಸಮಿತಿ ಸದಸ್ಯೆ ಎಂ.ಎನ್.ಮಂಜುಳಾ ಮಾತನಾಡಿ, ಮಹಿಳೆಯರ, ದಲಿತರ, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗುತ್ತಿರುವವರನ್ನು ತಲೆಯ ಮೇಲೆ ಹೊತ್ತು ತಿರುಗುವ ಸ್ಥಿತಿ ಈಗ ಇದೆ ಎಂದರು.

ಜಿಲ್ಲಾ ಸಮಿತಿ ಸದಸ್ಯ ಪಂಪಾಪತಿ, ಯರ‍್ರಿಸ್ವಾಮಿ ಮುಂಡರಗಿ ಮಾತನಾಡಿದರು. ಪಾಲಾಕ್ಷ ಹಡಗಲಿ ಕ್ರಾಂತಿಗೀತೆ ಹಾಡಿದರು. ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಪ್ರಕಾಶ್ ಬಸವನದುರ್ಗ, ಕಲ್ಮೇಶ್ ಗುದಿಗೇನವರ್, ಶಿವಮ್ಮ ಡಣಾಪುರ, ಮಂಜುಳಾ ಡೊಳ್ಳಿ, ಅಜಯ್ ಬೊಬ್ಬಗಟ್ಟ ಇದ್ದರು.

ಹಲವು ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ರಾಷ್ಟ್ರಪತಿ ಅವರಿಗೆ ಕಳುಹಿಸಿಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT